ಚಂಡೀಗಢ: ಸರ್ಕಾರಿ ಬಸ್ ಫ್ಲೈಓವರ್ನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ ಸಂಗ್ರೂರ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಪ್ರಯಾಣಿಕರನ್ನು ಹೊತ್ತು ಚಂಡೀಗಢಕ್ಕೆ ತೆರಳುತ್ತಿತ್ತು. ಸಂಗ್ರೂರ್ ಜಿಲ್ಲೆಯ ಧುರಿಯಿಂದ ಚಂಡೀಗಢದತ್ತ ಪೆಪ್ಸು ರಸ್ತೆ ಸಾರಿಗೆ ನಿಗಮದ ಬಸ್ ಪ್ರಯಾಣಿಸುತ್ತಿದ್ದಾಗ ಮುಂಜಾನೆ ಸುಮಾರು 4:30ರ ವೇಳೆಗೆ ಈ ಅಪಘಾತ ಸಂಭವಿಸಿದೆ.
ಬಸ್ ಫ್ಲೈಓವರ್ನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಹಾನಿಯಾಗಿದ್ದು, ಹಲವು ಪ್ರಯಾಣಿಕರು ಬಸ್ನೊಳಗೆ ಸಿಲುಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳು ಹಾಗೂ ದಾರಿಹೋಕರ ಸಹಾಯದೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಗಾಯಾಳುಗಳನ್ನು ಅಂಬುಲೆನ್ಸ್ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.








