Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ
    ಅಪರಾಧ

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    adminBy adminNovember 12, 2026Updated:November 12, 2026No Comments2 Mins Read

    ಮಂಡ್ಯ: ರಾಜ್ಯದಲ್ಲಿ ಪೊಲೀಸ್ ತನಿಖೆಯ ಲೋಪಕ್ಕೆ ನಿರಪರಾಧಿಯೊಬ್ಬರು ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೇ ಇದೀಗ ದಿಢೀರ್ ಪ್ರತ್ಯಕ್ಷವಾಗಿದ್ದು, ಆಕೆಯ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ವ್ಯಕ್ತಿ ನಿರಪರಾಧಿ ಎಂಬುದು ಬಹಿರಂಗವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಈ ಘಟನೆ ಪೊಲೀಸ್ ತನಿಖೆಯ ಹೊಣೆಗಾರಿಕೆ ಮತ್ತು ಅಮಾಯಕರಿಗೆ ನ್ಯಾಯ ಸಿಗುವ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ನಡೆದಿದ್ದೇನು?

    2019ರಲ್ಲಿ ಪಾಂಡವಪುರ ಪಟ್ಟಣದಿಂದ ಮಂಜು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಆಕೆಯ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಮಂಜು ನಾಪತ್ತೆಯಾಗುವ ಮುನ್ನ ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಸಿಕ್ಕಿದ್ದ ರಾಜೇಶ್ ಎಂಬಾತನ ಮೊಬೈಲ್‌ನಿಂದ ಕೊನೆಯ ಕರೆ ಮಾಡಿರುವುದು ತಿಳಿದುಬಂದಿತ್ತು. ಇದೇ ಸುಳಿವು ಆಧರಿಸಿ ಸುಮಾರು ಎರಡು ವರ್ಷಗಳ ಬಳಿಕ ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

    ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆದ ಆರೋಪ

    ಆದರೆ ಪ್ರಕರಣದ ತನಿಖೆ ವೇಳೆ ಪೊಲೀಸರು ರಾಜೇಶ್‌ಗೆ ಚಿತ್ರಹಿಂಸೆ ನೀಡಿ, ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೂಟಿನಿಂದ ಒದ್ದು, ವಿದ್ಯುತ್ ಶಾಕ್ ನೀಡಿ, ಮನೆಯವರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಭಯಗೊಂಡ ರಾಜೇಶ್ ತಾನು ಮಾಡದ ತಪ್ಪನ್ನು ಒಪ್ಪಿಕೊಂಡಿದ್ದ ಎನ್ನಲಾಗಿದೆ. ಅಂದಿನ ಪಾಂಡವಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಭಾಕರ್ ಅವರ ತನಿಖಾ ವೈಖರಿಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

    ಈ ಪ್ರಕರಣದಲ್ಲಿ 2021ರಿಂದ ಸುಮಾರು ಎರಡೂವರೆ ವರ್ಷ ಜೈಲಿನಲ್ಲಿದ್ದ ರಾಜೇಶ್, 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ನಾಗಮಂಗಲ ಪಟ್ಟಣದಲ್ಲಿ ಮಂಜು ಜೀವಂತವಾಗಿರುವುದು ಪತ್ತೆಯಾಗಿದೆ. ರಾಜೇಶ್ ಪರ ವಕೀಲ ನಟೇಶ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಹಿಳೆಯನ್ನು ಪತ್ತೆಹಚ್ಚಲಾಗಿದೆ.

    ವರ್ಷಗಳ ನಂತರ ಸಿಕ್ಕ ಮಹಿಳೆ ಹೇಳಿದ್ದೇನು?

    ನಂತರ ಆಕೆಯನ್ನು ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಿ ಹೇಳಿಕೆ ದಾಖಲಿಸಲಾಗಿದೆ. ಇಷ್ಟವಿಲ್ಲದ ಮದುವೆ ಮಾಡಿಸಿದ್ದರಿಂದ ಮನೆ ಬಿಟ್ಟು ಹೋಗಿದ್ದೆ. ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಜೀವನ ನಡೆಸುತ್ತಿದ್ದೇನೆ. ರಾಜೇಶ್ ಎಂಬುವವರ ಪರಿಚಯವೇ ನನಗಿಲ್ಲ ಎಂದು ಮಂಜು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

    ಮಹಿಳೆ ಜೀವಂತವಾಗಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ನಿರಪರಾಧಿಯೊಬ್ಬನನ್ನು ಕೊಲೆ ಆರೋಪದಲ್ಲಿ ಜೈಲಿಗೆ ಕಳುಹಿಸಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಪೊಲೀಸರ ತನಿಖಾ ಲೋಪ, ಬಲವಂತದ ತಪ್ಪೊಪ್ಪಿಗೆ ಆರೋಪ ಹಾಗೂ ರಾಜೇಶ್ ಅನುಭವಿಸಿದ ಜೈಲುವಾಸಕ್ಕೆ ಯಾರು ಹೊಣೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.




    #crime #karnataka
    Previous Articleದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ
    Next Article ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    Related Posts

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026

    ಮತ್ತೆ ಎಡವಿತಾ ಬುದ್ಧಿವಂತರ ಜಿಲ್ಲೆ, ಮಂಗಳೂರು? ಕೋಟಿ ಕೋಟಿ ಲೂಟಿ ಮಾಡಿ ಪರಾರಿಯಾದ ‘ಲಂಚುಲಾಲ್’

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.