ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುರುವಾರ ಮುಂಜಾನೆ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ ಮೃತದೇಹ ಬುಲೆಟ್ಗಳು ತಗುಲಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 6 ಶಂಕಿತರನ್ನ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಹುತಾತ್ಮರಾದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳನ್ನ ಬಾಬಿ ಚಂದ್ (57) ಹಾಗೂ ವರ್ಷದ ರಾಶ್ಪಾಲ್ ಕುಮಾರ್ (45). ಇವರಿಬ್ಬರು ಕಿಶ್ತ್ವಾರ್ ಪೊಲೀಸರ ‘ಸ್ಪೆಷಲ್ ಆಪರೇಷನ್ಸ್ ಗ್ರೂಪ್’ (ಎಸ್ಒಜಿ) ಗೆ ಸೇರಿದವರಾಗಿದ್ದು, ಕಿಯಾರ್ ವಲಯದಲ್ಲಿ ನಿಯೋಜನೆಗೊಂಡಿದ್ದರು.
ನ. 11 ರಂದು ಇವರಿಬ್ಬರು ದಚ್ಚನ್ ಅರಣ್ಯ ಪ್ರದೇಶದಿಂದ ನಾಪತ್ತೆಯಾಗಿದ್ದರು. ಅದೇ ದಿನ ಉಗ್ರರು ಕುಲ್ಗಾಮ್ನ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ದಾಳಿ ನಡೆಸಿದ್ದರು. ಮರ್ವಾದಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಕಾನೂನುಬದ್ಧವಾಗಿ ವೈದ್ಯಕೀಯ ಪ್ರಕ್ರಿಯೆಗಳನ್ನ ಪೂರ್ಣಗೊಳಿಸಿದ ನಂತರ, ಶುಕ್ರವಾರ ಮೃತದೇಹಗಳನ್ನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.








