Close Menu
    What's Hot

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ
    ಅಪರಾಧ

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    adminBy adminNovember 14, 2026No Comments1 Min Read

    ಮಂಗಳೂರು: ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ 1.15 ಕೋಟಿ ರೂ. ನಗದು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕಾರವಾರ ಸಂಚಾರಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಎಂದು ಗುರುತಿಸಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆಯೇ ಉಡುಪಿ ಜಿಲ್ಲೆಯ ಕಾಪು ನಿವಾಸಿ ಅಜೀಜ್, ಹಳಿಯಾಳದ ನಸ್ರುಲ್ಲಾ ಖಾನ್, ಹಾಗೂ ಕಾರವಾರದ ನಿತ್ಯಾನಂದ ಮತ್ತು ಖಾಲಿದ್ ಎಂಬುವವರನ್ನು ಬಂಧಿಸಿದ್ದರು. ಪ್ರಕರಣದ ಪ್ರಮುಖ ಆರೋಪಿ ಗಣೇಶ್ ಕೋಳಂಕರ್‌ನ ಬಂಧನ ಇನ್ನೂ ಬಾಕಿಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಕರಣದ ವಿವರ:
    ದೂರಿನ ಪ್ರಕಾರ, ಸತ್ಯನಾರಾಯಣ ಎಂಬುವವರು ದಾವಣಗೆರೆಯಿಂದ ಬಸ್ಸಿನಲ್ಲಿ ಮಂಗಳೂರಿಗೆ 1.15 ಕೋಟಿ ರೂ. ನಗದು ತರುತ್ತಿರುವ ವಿಷಯ ಆರೋಪಿ ಶ್ರೀಶೈಲ್‌ಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿ ಯುವಕರ ತಂಡವೊಂದನ್ನು ಕಟ್ಟಿಕೊಂಡ ಆತ, ಪೊಲೀಸರ ಸೋಗಿನಲ್ಲಿ ಸತ್ಯನಾರಾಯಣ ಅವರ ಬಳಿ ಬಂದು ಹಣವನ್ನು ದರೋಡೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಈ ಕುರಿತು ಸತ್ಯನಾರಾಯಣ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಉರ್ವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

    ತನಿಖೆಯ ವೇಳೆ, ಶ್ರೀಶೈಲ್ ಈ ಕೃತ್ಯಕ್ಕೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನಿವಾಸಿ ಗಣೇಶ್ ಕೋಳಂಕರ್ ಎಂಬ ಯುವಕನನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಾಗಿ ಮಂಗಳೂರು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

    ದರೋಡೆ ಮತ್ತು ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧನದ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಆತನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.




    Previous Articleಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    Related Posts

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.