Close Menu
    What's Hot

    ಮೂರು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ; ಸರ್ಕಾರಿ ಅಧಿಕಾರಿಗಳ ನಿವಾಸಗಳಲ್ಲಿ ತಪಾಸಣೆ

    November 18, 2026

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೂರು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ; ಸರ್ಕಾರಿ ಅಧಿಕಾರಿಗಳ ನಿವಾಸಗಳಲ್ಲಿ ತಪಾಸಣೆ
    ಅಪರಾಧ

    ಮೂರು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ; ಸರ್ಕಾರಿ ಅಧಿಕಾರಿಗಳ ನಿವಾಸಗಳಲ್ಲಿ ತಪಾಸಣೆ

    adminBy adminNovember 18, 2026Updated:November 18, 2026No Comments2 Mins Read

    ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ  ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ದಾಳಿ  ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

    ಎಲ್ಲೆಲ್ಲಿ ದಾಳಿ?

    ಚಿತ್ರದುರ್ಗ
    ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು.

    ವಿದ್ಯಾನಗರದಲ್ಲಿರುವ ವೆಂಕಟೇಶ್ ಅವರ ನಿವಾಸ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ಹಾಗೂ ಪರಿಶೀಲನೆ ನಡೆದಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

    ಬಾಗಲಕೋಟೆ
    ಇನ್ನೂ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮಖಂಡಿ ತಾಲೂಕು ಪಂಚಾಯತ್‌ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜು ಹಿಪ್ಪರಗಿ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಮೈಗೂರು ರಸ್ತೆ ಹಾಗೂ ವಿಜಯನಗರ ಬಡಾವಣೆಯಲ್ಲಿರುವ ಸಂಜು ಹಿಪ್ಪರಗಿ ಅವರ ಎರಡು ಮನೆಗಳ ಮೇಲೆ ದಾಳಿ ನಡೆದಿದೆ. ಮೂಲತಃ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದವರಾದ ಸಂಜು ಹಿಪ್ಪರಗಿ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.

    ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಮಹಾಲಿಂಗ್ ನಂದಗಾವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಸುಮಾರು ಏಳು ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವಿಜಯನಗರ ಬಡಾವಣೆಯಲ್ಲಿರುವ ನಿವಾಸದಲ್ಲಿಯೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

    ಹಾಸನ
    ಹಾಸನ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸಕಲೇಶಪುರ ವಲಯದ ಅರಣ್ಯಾಧಿಕಾರಿ  ಹೇಮಂತ್‌ಕುಮಾರ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್‌ಕುಮಾರ್ ಅವರ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

    ಇದಲ್ಲದೆ, ಆಲೂರು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಹೇಮಂತ್‌ಕುಮಾರ್ ಅವರ ಮಾವನ ಮನೆ ಹಾಗೂ ಕುವೆಂಪು ನಗರದಲ್ಲಿರುವ ಅವರ ಆಪ್ತ ಗುತ್ತಿಗೆದಾರ ಹರೀಶ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಐದು ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

     




    #crime #karnataka
    Previous Articleಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    Related Posts

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮೂರು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ; ಸರ್ಕಾರಿ ಅಧಿಕಾರಿಗಳ ನಿವಾಸಗಳಲ್ಲಿ ತಪಾಸಣೆ

    November 18, 2026

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮೂರು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ; ಸರ್ಕಾರಿ ಅಧಿಕಾರಿಗಳ ನಿವಾಸಗಳಲ್ಲಿ ತಪಾಸಣೆ

    November 18, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.