ಇಂಫಾಲ್: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅಕ್ರಮ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 15 ಜನರು ಮೃತಪಟ್ಟಿದ್ದು, 181 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯ ರಾಜಧಾನಿ ಇಂಫಾಲ್ನ ಎರಡು ಆಸ್ಪತ್ರೆಗಳಲ್ಲಿ ಕನಿಷ್ಠ 181 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎರಡು ಆಸ್ಪತ್ರೆಗಳಿಗೆ ಶುಕ್ರವಾರ ಸಂಜೆ ಸಿಎಂ ಯುಮ್ನಾಮ್ ಖೇಮ್ಚಂದ್ ಸಿಂಗ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
ಲ್ಯಾಂಫೆಲ್ಪಟ್ನ ಶಿಜಾ ಆಸ್ಪತ್ರೆಯಲ್ಲಿ 140 ರೋಗಿಗಳು ದಾಖಲಾಗಿದ್ದಾರೆ. ಸಜಿವಾದ ಬಬಿನಾ ಆಸ್ಪತ್ರೆಯಲ್ಲಿ 41 ರೋಗಿಗಳು ದಾಖಲಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.








