Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ನೂಡಲ್ಸ್ ಸೇವಿಸಿದ ಬಳಿಕ ಪ್ರಜ್ಞಾಹೀನಳಾದ ಬಾಲಕಿ; ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು
    ರಾಷ್ಟ್ರೀಯ

    ನೂಡಲ್ಸ್ ಸೇವಿಸಿದ ಬಳಿಕ ಪ್ರಜ್ಞಾಹೀನಳಾದ ಬಾಲಕಿ; ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು

    adminBy adminNovember 21, 2026No Comments1 Min Read

    ಜೈಪುರ : ಮನೆಯಲ್ಲಿ ತಾವೇ ತಯಾರಿಸಿಕೊಂಡ ನೂಡಲ್ಸ್ ಸೇವಿಸಿದ ಪರಿಣಾಮ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಆಕೆಯ ಅಕ್ಕ ತೀವ್ರ ಅಸ್ವಸ್ಥಗೊಂಡಿರುವ ದಾರುಣ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಆಹಾರ ವಿಷವಾಗಿರುವ  ಶಂಕೆ ವ್ಯಕ್ತವಾಗಿದೆ. ಪಿಹು ಕುಮಾವತ್ (7) ಮೃತ ದುರ್ದೈವಿ ಬಾಲಕಿ. ಆಕೆಯ ಸಹೋದರಿ ದಿವ್ಯಾಂಶಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

    ಕಳೆದ ನವೆಂಬರ್ 19ರಂದು ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಪಿಹು ಮತ್ತು ದಿವ್ಯಾಂಶಿ ತಾವೇ ನೂಡಲ್ಸ್ ತಯಾರಿಸಿಕೊಂಡು ಸೇವಿಸಿದ್ದಾರೆ. ಬಳಿಕ ಇಬ್ಬರೂ ನಿದ್ರೆಗೆ ಜಾರಿದ್ದಾರೆ. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ತಾಯಿ ಮನೆಗೆ ಮರಳಿದಾಗ, ಅಕ್ಕ ದಿವ್ಯಾಂಶಿ ಎಚ್ಚರಗೊಂಡಿದ್ದು ತೀವ್ರ ಅಸ್ವಸ್ಥಳಾಗಿದ್ದಳು. ಆದರೆ, ತಂಗಿ ಪಿಹು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಳು. ತಕ್ಷಣವೇ ಗಾಬರಿಗೊಂಡ ಕುಟುಂಬಸ್ಥರು ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಪಿಹು ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ದಿವ್ಯಾಂಶಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಮೃತ ಬಾಲಕಿಯ ಕುಟುಂಬಸ್ಥರು ಕರಧನಿ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮನೆಯಲ್ಲಿ ಉಳಿದಿದ್ದ ನೂಡಲ್ಸ್ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಪ್ರಾಥಮಿಕ ಹಂತದಲ್ಲಿ ಫುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದ್ದರೂ, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಬಾಲಕಿಯ ಸಹೋದರ ಗೋವಿಂದ್ ಅನಾರೋಗ್ಯದ ಕಾರಣ ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ನಡುವೆ ಪುತ್ರಿಯ ಅಕಾಲಿಕ ಸಾವು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ.




    #national
    Previous Articleವಿಷಕಾರಿ ಮದ್ಯ ಸೇವಿಸಿ ಅಸ್ವಸ್ಥರಾದ 181 ಮಂದಿ; ಆಸ್ಪತ್ರೆಗಳಿಗೆ ಸಿಎಂ ಭೇಟಿ
    Next Article ಲುಕ್‌ಔಟ್ ನೋಟಿಸ್ ಹಿನ್ನೆಲೆ; ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

    Related Posts

    ತಿರುಪ್ಪರಂಕುಂಡ್ರಂ ಬೆಟ್ಟದ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ವಿಫಲವಾದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ; ದೇವಾಲಯದ ಟ್ರಸ್ಟ್ ಅಮಾನತು

    November 27, 2026

    ಅಮಿತಾಭ್ ಬಚ್ಚನ್ ಮನೆ, ಮುಂಬೈ ಮೇಯರ್ ಕಚೇರಿಗೆ ಬಾಂಬ್ ಬೆದರಿಕೆ; ಹೈ ಅಲರ್ಟ್ ಘೋಷಣೆ

    November 26, 2026

    ದೆಹಲಿ ಗಲಭೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಡೆ; ಪೊಲೀಸರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ

    November 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.