Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಸೌಂದರ್ಯವರ್ಧಕ ಕ್ರೀಮ್‌ನಿಂದ ಕಿಡ್ನಿಗೆ ಕುತ್ತು; ಬಾಲಕಿ ಬಳಸಿದ ಉತ್ಪನ್ನದಲ್ಲಿ ಅಪಾಯಕಾರಿ ಪ್ರಮಾಣದ ಪಾದರಸ ಪತ್ತೆ
    ರಾಷ್ಟ್ರೀಯ

    ಸೌಂದರ್ಯವರ್ಧಕ ಕ್ರೀಮ್‌ನಿಂದ ಕಿಡ್ನಿಗೆ ಕುತ್ತು; ಬಾಲಕಿ ಬಳಸಿದ ಉತ್ಪನ್ನದಲ್ಲಿ ಅಪಾಯಕಾರಿ ಪ್ರಮಾಣದ ಪಾದರಸ ಪತ್ತೆ

    adminBy adminNovember 24, 2026No Comments2 Mins Read

    ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವ ಸೌಂದರ್ಯವರ್ಧಕ ಉತ್ಪನ್ನಗಳ ಜಾಹೀರಾತುಗಳನ್ನು ನಂಬಿ ಖರೀದಿಸುವ ಮುನ್ನ ಗ್ರಾಹಕರು ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌ಗಳ ಪ್ರಚಾರಕ್ಕೆ ಮರುಳಾಗಿ ಫೇರ್‌ನೆಸ್ ಕ್ರೀಮ್ ಬಳಸಿದ 17 ವರ್ಷದ ಬಾಲಕಿಯೊಬ್ಬಳು ಗಂಭೀರ ಕಿಡ್ನಿ ಕಾಯಿಲೆಗೆ ತುತ್ತಾಗಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ಆತಂಕ ಮೂಡಿಸಿದೆ.

    ಮೊಡವೆ, ಕಪ್ಪು ಕಲೆ ಹಾಗೂ ಪಿಗ್ಮೆಂಟೇಷನ್ ಸಮಸ್ಯೆ ನಿವಾರಣೆಯಾಗುತ್ತದೆ ಎಂಬ ಜಾಹೀರಾತನ್ನು ನಂಬಿ ಬಾಲಕಿ ಸುಮಾರು ಒಂದು ವರ್ಷ ಈ ಕ್ರೀಮ್ ಬಳಸಿದ್ದಳು ಎನ್ನಲಾಗಿದೆ. ಆದರೆ, ಆಕೆಯ ದೇಹದಲ್ಲಿ ಅಪಾಯಕಾರಿ ಪ್ರಮಾಣದ ಪಾದರಸ ಪತ್ತೆಯಾಗಿದ್ದು, ಕಿಡ್ನಿಯ ಕಾರ್ಯನಿರ್ವಹಣೆಯ ಮೇಲೂ ಗಂಭೀರ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

    ವರದಿಗಳ ಪ್ರಕಾರ, ಬಾಲಕಿ ಬಳಸುತ್ತಿದ್ದ ಫೇರ್‌ನೆಸ್ ಕ್ರೀಮ್ ಅನ್ನು ಪರೀಕ್ಷಿಸಿದಾಗ ಬರೋಬ್ಬರಿ 12,500 PPM ಪ್ರಮಾಣದ ಮರ್ಕ್ಯುರಿ (ಪಾದರಸ) ಅಂಶ ಪತ್ತೆಯಾಗಿದೆ. ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಪಾದರಸದ ಅನುಮತಿಸಲಾದ ಮಿತಿ 1 PPMಗಿಂತ ಕಡಿಮೆಯಿದ್ದು, ಈ ಕ್ರೀಮ್‌ನಲ್ಲಿ ಪತ್ತೆಯಾದ ಪ್ರಮಾಣ ಆತಂಕಕಾರಿಯಾಗಿದೆ.

    ಪಾದರಸದಂತಹ ವಿಷಕಾರಿ ಲೋಹಗಳು ದೇಹವನ್ನು ಪ್ರವೇಶಿಸಿದರೆ ಮೂತ್ರಪಿಂಡಗಳ ಕಾರ್ಯನಿರ್ವಹಣೆಗೆ ಹಾನಿಯುಂಟಾಗಬಹುದು. ಬಾಲಕಿಯ ಕಿಡ್ನಿಯ ಫಿಲ್ಟರಿಂಗ್ ಘಟಕಗಳಿಗೆ ಹಾನಿಯಾಗಿದ್ದು, ಮೆಂಬ್ರೇನಸ್ ನೆಫ್ರೋಪತಿ ಎಂಬ ಗಂಭೀರ ಕಾಯಿಲೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾಲುಗಳಲ್ಲಿ ಊತ, ರಕ್ತದೊತ್ತಡದಲ್ಲಿ ಏರುಪೇರು ಹಾಗೂ ಪ್ರಜ್ಞೆ ತಪ್ಪುವಂತಹ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

    ಈ ಘಟನೆಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ತನಿಖೆಗೆ ಸೂಚನೆ ನೀಡಿದ್ದು, ಮಕ್ಕಳ ಹಕ್ಕುಗಳ ಆಯೋಗವೂ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಕ್ರೀಮ್‌ನ ಗುಣಮಟ್ಟ, ಅದರಲ್ಲಿರುವ ರಾಸಾಯನಿಕ ಅಂಶಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾದ ಜಾಹೀರಾತುಗಳ ಸತ್ಯಾಸತ್ಯತೆ ಕುರಿತು ಪರಿಶೀಲನೆ ನಡೆಯಬೇಕಿದೆ.

    ಈ ಘಟನೆ ಆನ್‌ಲೈನ್‌ನಲ್ಲಿ ಪ್ರಚಾರವಾಗುವ ಸೌಂದರ್ಯವರ್ಧಕ ಉತ್ಪನ್ನಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸೆಲೆಬ್ರಿಟಿಗಳು ಅಥವಾ ಇನ್‌ಫ್ಲುಯೆನ್ಸರ್‌ಗಳು ಪ್ರಚಾರ ಮಾಡುತ್ತಾರೆ ಎಂಬ ಕಾರಣಕ್ಕೆ ಯಾವುದೇ ಉತ್ಪನ್ನವನ್ನು ಸುರಕ್ಷಿತವೆಂದು ಭಾವಿಸಿ ಬಳಸುವುದು ಅಪಾಯಕಾರಿ. ಸೌಂದರ್ಯವರ್ಧಕ ಉತ್ಪನ್ನಗಳನ್ನು ಖರೀದಿಸುವ ಮುನ್ನ ಅದರ ಲೇಬಲ್, ತಯಾರಕರ ವಿವರ, ಪದಾರ್ಥಗಳ ಪಟ್ಟಿ, ಪರವಾನಗಿ ಹಾಗೂ ಮುಕ್ತಾಯ ದಿನಾಂಕವನ್ನು ಪರಿಶೀಲಿಸುವುದು ಅಗತ್ಯ.

    ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ಚರ್ಮದ ಬಣ್ಣ ಬದಲಾಯಿಸುವ, ಮೊಡವೆ ಹಾಗೂ ಕಪ್ಪು ಕಲೆ ಸೇರಿದಂತೆ ಎಲ್ಲ ಚರ್ಮದ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸುವುದಾಗಿ ಭರವಸೆ ನೀಡುವ ಉತ್ಪನ್ನಗಳ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಬೇಕು. ಸೌಂದರ್ಯಕ್ಕಿಂತ ಆರೋಗ್ಯ ಮುಖ್ಯ ಎಂಬುದನ್ನು ಇಂತಹ ಘಟನೆಗಳು ಮತ್ತೊಮ್ಮೆ ನೆನಪಿಸಿವೆ.




    #national
    Previous Articleಮಂಗಳೂರು: ಹಣ ಸುಲಿಗೆ ಪ್ರಕರಣಕ್ಕೆ ಹೊಸ ತಿರುವು; ಮಹಿಳೆಯೊಂದಿಗಿನ ಆಡಿಯೋ ಸಂಭಾಷಣೆ ವಿವಾದದಿಂದ ಅರುಣ್ ಆಳ್ವ ಅಮಾನತು
    Next Article ಅಸಲಿ ಪನ್ನೀರ್ ಹೆಸರಿನಲ್ಲಿ ನಕಲಿ ಉತ್ಪನ್ನ ಮಾರಾಟ ಆರೋಪ; ಲೀಟರ್‌ಗಟ್ಟಲೆ ಪಾಮ್ ಆಯಿಲ್ ವಶಕ್ಕೆ

    Related Posts

    ತಿರುಪ್ಪರಂಕುಂಡ್ರಂ ಬೆಟ್ಟದ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ವಿಫಲವಾದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ; ದೇವಾಲಯದ ಟ್ರಸ್ಟ್ ಅಮಾನತು

    November 27, 2026

    ಅಮಿತಾಭ್ ಬಚ್ಚನ್ ಮನೆ, ಮುಂಬೈ ಮೇಯರ್ ಕಚೇರಿಗೆ ಬಾಂಬ್ ಬೆದರಿಕೆ; ಹೈ ಅಲರ್ಟ್ ಘೋಷಣೆ

    November 26, 2026

    ದೆಹಲಿ ಗಲಭೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಡೆ; ಪೊಲೀಸರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ

    November 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.