Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕ್ಯಾನ್ಸರ್ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆಗಳಲ್ಲೇ ಕೀಮೋಥೆರಪಿ; ಡಯಾಲಿಸಿಸ್ ಚಿಕಿತ್ಸೆಯಲ್ಲೂ ಹೊಸ ನಿಯಮ ಜಾರಿ
    ಕರಾವಳಿ ಸುದ್ದಿ

    ಕ್ಯಾನ್ಸರ್ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆಗಳಲ್ಲೇ ಕೀಮೋಥೆರಪಿ; ಡಯಾಲಿಸಿಸ್ ಚಿಕಿತ್ಸೆಯಲ್ಲೂ ಹೊಸ ನಿಯಮ ಜಾರಿ

    adminBy adminNovember 24, 2026No Comments2 Mins Read

    ಮಂಗಳೂರು: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಬಡ ರೋಗಿಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೇ ಗುಣಮಟ್ಟದ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರ ಮೂರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

    ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಾತನಾಡಿ, ಕ್ಯಾನ್ಸರ್, ಹೃದ್ರೋಗ ಹಾಗೂ ಕಿಡ್ನಿ ರೋಗಿಗಳಿಗೆ ವರದಾನವಾಗುವ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
    ‍
    ಹೃದಯಾಘಾತದಿಂದ ಸಂಭವಿಸುವ ಅಕಾಲಿಕ ಸಾವುಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ’ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ಎದೆನೋವು ಕಾಣಿಸಿಕೊಂಡ ತಕ್ಷಣ ರೋಗಿಗಳು ತಾಲೂಕು ಆಸ್ಪತ್ರೆಗಳಲ್ಲೇ ತುರ್ತಾಗಿ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶವಿರಲಿದೆ.

    ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ದೂರದ ಮಹಾನಗರಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೀಮೋಥೆರಪಿ ಡೇ ಕೇರ್ ಸೆಂಟರ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ 3 ತಿಂಗಳ ಒಳಗಾಗಿ ಈ ಡೇ ಕೇರ್ ಸೆಂಟರ್‌ಗಳನ್ನು ಆರಂಭಿಸುವ ಗುರಿ ಹೊಂದಲಾಗಿದ್ದು, ಜಿಲ್ಲಾ ಮಟ್ಟದಲ್ಲೇ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಬಲಪಡಿಸಲು ಆರೋಗ್ಯ ಇಲಾಖೆ ಸಕಲ ಕ್ರಮ ಕೈಗೊಂಡಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.

    ಇಸಿಜಿ ಪರೀಕ್ಷೆಯಲ್ಲಿ ಹೃದಯಾಘಾತದ ಲಕ್ಷಣಗಳು ಕಂಡುಬಂದರೆ ರೋಗಿಗಳಿಗೆ ತಕ್ಷಣ ಉಚಿತವಾಗಿ ಜೀವರಕ್ಷಕ ತುರ್ತು ಇಂಜೆಕ್ಷನ್ ನೀಡಲಾಗುವುದು. ಬಳಿಕ ಅಗತ್ಯವಿದ್ದರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಆಂಜಿಯೋಗ್ರಫಿ ಸೇರಿದಂತೆ ಹೆಚ್ಚಿನ ಚಿಕಿತ್ಸೆ ನೀಡುವ ಮೂಲಕ ‘ಗೋಲ್ಡನ್ ಅವರ್’ ನಲ್ಲೇ ಜೀವ ಉಳಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಸುರಕ್ಷತೆ ಮತ್ತು ಚಿಕಿತ್ಸೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಚಿವ ಯು.ಟಿ. ಖಾದರ್ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಡಯಾಲಿಸಿಸ್ ಕೇಂದ್ರಗಳಲ್ಲಿ ಚಿಕಿತ್ಸೆಗೆ ಬಳಸುವ ಡಯಲೈಜರ ಅನ್ನು ಕೇವಲ ಒಂದು ಬಾರಿ ಮಾತ್ರ ಬಳಸಬೇಕು. ಒಮ್ಮೆ ಬಳಕೆ ಮಾಡಿದ ಡಯಲೈಜರ್‌ಗಳನ್ನು ಮತ್ತೆ ಮರುಬಳಕೆ ಮಾಡುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.

    ಪ್ರಸ್ತುತ ರಾಜ್ಯದಲ್ಲಿ ಒಟ್ಟು 169 ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 639 ಡಯಾಲಿಸಿಸ್ ಯಂತ್ರಗಳು ಲಭ್ಯವಿವೆ. ರಾಜ್ಯಾದ್ಯಂತ ಪ್ರತಿವರ್ಷ ಸುಮಾರು 5 ಲಕ್ಷ ಡಯಾಲಿಸಿಸ್ ಸೆಷನ್‌ಗಳು ನಡೆಯುತ್ತಿದ್ದು, ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದರು.

     




    #dakshinakannada #karnataka
    Previous Articleಆಕ್ಸ್‌ಫರ್ಡ್, ಕೇಂಬ್ರಿಡ್ಜ್ ಕಾರ್ಯಕ್ರಮಕ್ಕೆ ತೆರಳಬೇಕಿದ್ದ ಸಿಜೆಪಿಯ ಸೌರವ್ ದಾಸ್‌ಗೆ ವಿಮಾನ ನಿಲ್ದಾಣದಲ್ಲಿ ತಡೆ
    Next Article ಉಡುಪಿ ಗ್ಯಾರಂಟಿ ಸಮಾವೇಶದಿಂದ ಮರಳುತ್ತಿದ್ದ ಬಸ್‌ಗೆ ಬುಲೆಟ್ ಟ್ಯಾಂಕರ್ ಡಿಕ್ಕಿ; ಡಿವೈಡರ್‌ಗೆ ಅಪ್ಪಳಿಸಿದ ಬಸ್

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.