Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚಿಕಿತ್ಸೆ ನೆಪದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ; ವಿಕ್ಟೋರಿಯಾ ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಶಿಫ್ಟ್ ಆದ ಕೆಪಿಎಸ್‌ಸಿ ಹಗರಣದ ಆರೋಪಿ
    ಅಪರಾಧ

    ಚಿಕಿತ್ಸೆ ನೆಪದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ; ವಿಕ್ಟೋರಿಯಾ ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಶಿಫ್ಟ್ ಆದ ಕೆಪಿಎಸ್‌ಸಿ ಹಗರಣದ ಆರೋಪಿ

    adminBy adminNovember 25, 2026No Comments2 Mins Read

    ಬೆಂಗಳೂರು: ಕೆಪಿಎಸ್​ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಪಡೆದುಕೊಂಡಿದ್ದ ಕನ್ನಾಳೆ, ಚಿಕಿತ್ಸೆಯ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜೈಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ವಿಕ್ಟೋರಿಯಾ ಆಸ್ಪತ್ರೆಯಿಂದ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

    ಮಂಡಿ ನೋವಿನ ನೆಪದಲ್ಲಿ ಆಸ್ಪತ್ರೆ ಸೇರಿದ್ದ ಕನ್ನಾಳೆ

    ಕೆಪಿಎಸ್​ಸಿ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಕನ್ನಾಳೆ, ಮಂಡಿ ನೋವು ತೀವ್ರವಾಗಿದ್ದು ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ತಮ್ಮ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಕೊಡಿಸುವಂತೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಕನ್ನಾಳೆ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, 48 ಗಂಟೆಗಳ ಒಳಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬಸವರಾಜ್ ಕನ್ನಾಳೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

    ಮತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    ಚಿಕಿತ್ಸೆ ಪಡೆಯುವ ಸಂಬಂಧ ಕನ್ನಾಳೆ ಸುಳ್ಳು ಮಾಹಿತಿ ನೀಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಜೈಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಪರಿಗಣಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ವಾಪಸ್ ಜೈಲಿಗೆ ಕರೆತರುವಂತೆ ಸೂಚನೆ ನೀಡಲಾಗಿದೆ. ಅದರಂತೆ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಿಂದ ಬಸವರಾಜ್ ಕನ್ನಾಳೆಯನ್ನು ಬಿಡುಗಡೆಗೊಳಿಸಿ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

    ಇನ್ನು ಕೆಪಿಎಸ್​ಸಿ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿ ಹಾಗೂ ಮಧ್ಯವರ್ತಿಯಾಗಿ ಗುರುತಿಸಿಕೊಂಡಿರುವ ಬಸವರಾಜ್ ಕನ್ನಾಳೆ ವಿರುದ್ಧ ತನಿಖೆ ಮುಂದುವರಿದಿದೆ. ಜಾರಿ ನಿರ್ದೇಶನಾಲಯ (ED) ಮತ್ತು ವಿಶೇಷ ತನಿಖಾ ತಂಡ (SIT) ಪ್ರಕರಣದ ತನಿಖೆ ನಡೆಸುತ್ತಿವೆ. ಈಗಾಗಲೇ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದೆ. KPSCಯಲ್ಲಿ ನಡೆದಿರುವ ವಿವಿಧ ಪರೀಕ್ಷೆಗಳ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಹೀಗಾಗಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.




    Previous Articleಚೆನ್ನೈ–ಮಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು; ಅಂತರ್‌ರಾಜ್ಯ ಕಳ್ಳರ ತಂಡದ ನಾಯಕನ ಬಂಧನ
    Next Article ವಿಟ್ಲ: ಚಿಕ್ಕಪ್ಪನ ಕೊಲೆ ಆರೋಪದಲ್ಲಿ ಯುವತಿ; ಸ್ಥಳಕ್ಕೆ ಪೊಲೀಸರ ಭೇಟಿ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.