Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆಗೆ ಕುಟುಂಬಸ್ಥರ ಆಗ್ರಹ
    ಅಂತರಾಷ್ಟ್ರೀಯ

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆಗೆ ಕುಟುಂಬಸ್ಥರ ಆಗ್ರಹ

    adminBy adminNovember 25, 2026No Comments1 Min Read

    ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತಪಡಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

    ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವೆಲ್ (41) ಮೃತಪಟ್ಟವರು.

    ಒಂದೂವರೆ ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗ ಮಾಡುತ್ತಿದ್ದ ಶಡ್ರಕ್, ಮೊದಲು ಟೆಲ್ ಅವೀವ್‌ನ ಇಸ್ರೇಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಇಸ್ರೇಲ್‌ನ ನಝರೆತ್ ಸಮೀಪದ ನೊಫ್ ಹಗಲಿಲ್‌ನಲ್ಲಿರುವ ಯುಸಿಟಿ ಲಿಕ್ವಿಡ್ ಸೊಲ್ಯೂಷನ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು.

    ಅ.16ರಂದು ರಾತ್ರಿ 8:49ಕ್ಕೆ ಶಡ್ರಕ್ ತಮ್ಮ ಪತ್ನಿಗೆ ಕೊನೆಯದಾಗಿ ಸಂದೇಶ ಕಳುಹಿಸಿದ್ದರು. ಅದಕ್ಕೂ ಮೊದಲು ಮನೆಯವರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿದ್ದರು. ಆ ಬಳಿಕದಿಂದ ಅವರು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಕೂಡ ಸಂಪರ್ಕಕ್ಕೆ ಲಭ್ಯವಾಗಿರಲಿಲ್ಲ.

    ಶಡ್ರಕ್ ನಾಪತ್ತೆಯಾಗಿರುವ ಬಗ್ಗೆ ಆತಂಕಗೊಂಡ ಕುಟುಂಬಸ್ಥರು ಅ.21ರಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು. ಅಲ್ಲದೆ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಸಂಸದ ಬ್ರಿಜೇಶ್ ಚೌಟ ಹಾಗೂ ಸಚಿವ ಯು.ಟಿ. ಖಾದರ್ ಅವರಿಗೂ ದೂರು ನೀಡಿ, ಶಡ್ರಕ್ ಅವರನ್ನು ಪತ್ತೆಹಚ್ಚಲು ನೆರವಾಗುವಂತೆ ಮನವಿ ಮಾಡಿದ್ದರು.

    ಶಡ್ರಕ್ ನಾಪತ್ತೆಯಾದ ಸುಮಾರು ಒಂದು ವಾರದ ಬಳಿಕ ಅವರು ಮೃತಪಟ್ಟಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಲಭಿಸಿತ್ತು. ಇದೀಗ ಬರೋಬ್ಬರಿ ಒಂದು ತಿಂಗಳ ಬಳಿಕ ಅವರ ಮೃತದೇಹವನ್ನು ಭಾರತಕ್ಕೆ ರವಾನಿಸಲಾಗಿದ್ದು, ನಿನ್ನೆ (ನ.24) ರಾತ್ರಿ ತಾಯ್ನಾಡಿಗೆ ತಲುಪಿದೆ

    ವಿದೇಶದಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ ಶಡ್ರಕ್ ನಿಗೂಢ ಸಾವಿನಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸಾವಿನ ಸುತ್ತ ಹಲವು ಅನುಮಾನಗಳಿದ್ದು, ಇದು ಸಹಜ ಸಾವಲ್ಲ, ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಶಂಕಿಸಿರುವ ಕುಟುಂಬಸ್ಥರು, ಇಸ್ರೇಲ್‌ನಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಾವಿನ ಹಿಂದಿನ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ




    #crime #dakshinakannada International
    Previous Articleಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಅರೆಸ್ಟ್
    Next Article ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ವಿನಯ್ ಕುಲಕರ್ಣಿಗೆ ಎರಡು ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಸೂಚನೆ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.