Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ವಿನಯ್ ಕುಲಕರ್ಣಿಗೆ ಎರಡು ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಸೂಚನೆ
    ಅಪರಾಧ

    ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ವಿನಯ್ ಕುಲಕರ್ಣಿಗೆ ಎರಡು ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಸೂಚನೆ

    adminBy adminNovember 25, 2026No Comments2 Mins Read

    ನವದೆಹಲಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್‌ ಗೌಡ ಕೊಲೆ ಕೇಸ್‌ನಲ್ಲಿ ಹೈಕೋರ್ಟ್ ಬೇಲ್ ಮೇಲೆ ಹೊರಗೆ ಬಂದಿದ್ದ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿಯಾಗಿದೆ. ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದ್ದು, 2 ವಾರಗಳಲ್ಲಿ ಸೆಷನ್ಸ್‌ ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿದೆ.

    2023ರ ಚುನಾವಣೆ ಗೆದ್ದ ಬಳಿಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಾಸಕ ವಿನಯ್ ಕುಲಕರ್ಣಿ ಬಹುತೇಕ ಜೈಲಿನಲ್ಲೇ ಇದ್ದರು. ಜಾಮೀನು ಪೆರೋಲ್‌ ಹೀಗೆ ಎರಡೆರಡು ಬಾರಿ ಜೈಲಿನಿಂದ ಹೊರ ಬಂದಿದ್ದ ವಿನಯ್ ಕುಲಕರ್ಣಿ ಈಗ ಮತ್ತೆ ಜೈಲುಪಾಲಾಗಿದ್ದಾರೆ. ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶ ಹೊರಡಿಸಿದೆ

    ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಯಿತು. ಇನ್ನೂ ವಿಚಾರಣಾ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜುಲೈ 31 ರಂದು ಹೈಕೋರ್ಟ್, ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಶಿಕ್ಷೆ ಹಾಗೂ ಅಪರಾಧ ನಿರ್ಣಯಕ್ಕೆ ತಡೆ ನೀಡಿ, ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶಗೌಡ ಸಹೋದರ ಗುರುನಾಥಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

    ಬಿಜೆಪಿಯ ಯೋಗೇಶ್‌ಗೌಡ ಹತ್ಯೆ ಹಿಸ್ಟರಿ
    * ಜೂನ್ 15, 2016ರಂದು ನಡೆದಿದ್ದ ಯೋಗೇಶ್ ಗೌಡ ಹತ್ಯೆ
    * 2019ರಲ್ಲಿ ರಾಜ್ಯ ಸರ್ಕಾರದಿಂದ ಕೇಸ್ ಸಿಬಿಐಗೆ ಹಸ್ತಾಂತರ
    * ನವೆಂಬರ್ 5, 2020ರಲ್ಲಿ ವಿನಯ್ ಕುಲಕರ್ಣಿ ಬಂಧನ
    * ಆಗಸ್ಟ್ 2021ರಲ್ಲಿ ಸುಪ್ರೀಂಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು
    * ಮೇ 2023ರಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
    * ಜೂನ್ 2025ರಲ್ಲಿ ಸುಪ್ರೀಂಕೋರ್ಟ್‌ನಿಂದ ಮತ್ತೆ ಜಾಮೀನು ರದ್ದು
    * ಏಪ್ರಿಲ್ 15, 2026ರಂದು 16 ಮಂದಿ ದೋಷಿ ಎಂದು ಜನಪ್ರತಿನಿಧಿ ಕೋರ್ಟ್ ತೀರ್ಪು
    * ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಜೀವಾವಧಿ ಶಿಕ್ಷೆ ಪ್ರಕಟ
    * ಮೇ 2026ರಲ್ಲಿ ಶಾಸಕ ಸ್ಥಾನ ವಜಾಗೊಳಿಸಿದ ವಿಧಾನಸಭಾಧ್ಯಕ್ಷರು
    * ಜುಲೈ 30-31, 2026ರಂದು ಹೈಕೋರ್ಟ್‌ನಿಂದ ಶಿಕ್ಷೆಗೆ ತಡೆಯಾಜ್ಞೆ
    * ಅ.2026ರಲ್ಲಿ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ



    Previous Articleಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆಗೆ ಕುಟುಂಬಸ್ಥರ ಆಗ್ರಹ
    Next Article ಕನ್ಯಾನ ಗ್ರಾಮ ಆಡಳಿತಾಧಿಕಾರಿಯೊಂದಿಗೆ ಕಚೇರಿಯಲ್ಲೇ ವ್ಯಕ್ತಿಯ ಕಿರಿಕ್; ನಿಂದನೆ, ಹಲ್ಲೆಗೆ ಯತ್ನದ ಆರೋಪ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.