Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು: ಪಂಪ್‌ವೆಲ್ ಬಳಿ ಬಳಿ ಬೈಕ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
    ಕರಾವಳಿ ಸುದ್ದಿ

    ಮಂಗಳೂರು: ಪಂಪ್‌ವೆಲ್ ಬಳಿ ಬಳಿ ಬೈಕ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

    adminBy adminNovember 26, 2026No Comments1 Min Read

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್ ಸಮೀಪದ ಉಜ್ಜೋಡಿ ಗೋರಿಗುಡ್ಡ ಬಳಿ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ (19) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ (GNM) ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಜ್ಯೋತಿ, ಕುಟುಂಬಕ್ಕೆ ಆಧಾರವಾಗಬೇಕೆಂಬ ಕನಸು ಕಂಡಿದ್ದರು. ಆದರೆ, ವಿಧಿಯಾಟಕ್ಕೆ ಆಕೆಯ ಕನಸು ನನಸಾಗುವ ಮೊದಲೇ ಕಮರಿಹೋಗಿದೆ

    ಕಳೆದ ನವೆಂಬರ್ 14ರಂದು ಬೆಳಿಗ್ಗೆ ಜ್ಯೋತಿ ಮತ್ತು ಆಕೆಯ ಸಂಬಂಧಿ ನಂದಿನಿ (19) ಉಜ್ಜೋಡಿ ಗೋರಿಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿಯ ವಿಭಜಕ (Divider) ದಾಟಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ ಇಬ್ಬರಿಗೂ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಜ್ಯೋತಿ ಹಾಗೂ ನಂದಿನಿ ಗಂಭೀರವಾಗಿ ಗಾಯಗೊಂಡಿದ್ದರೆ, ಬೈಕ್ ಸವಾರರಿಗೂ ಗಾಯಗಳಾಗಿದ್ದವು. ಆಸ್ಪತ್ರೆಗೆ ದಾಖಲಾಗಿ ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ಜ್ಯೋತಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

    ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿ ಅವರ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ನೆಲೆಸಿದೆ. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯಿಂದ ಜೀವನ ಸಾಗಿಸುತ್ತಿರುವ ಬಡ ಕುಟುಂಬದಲ್ಲಿ ಜ್ಯೋತಿ ಹಿರಿಯ ಪುತ್ರಿಯಾಗಿದ್ದರು. ‘‘ಕಷ್ಟದಲ್ಲೇ ಬೆಳೆದು ಬಂದಿದ್ದ ಜ್ಯೋತಿ, ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ದೊಡ್ಡ ಕನಸು ಕಂಡಿದ್ದಳು. ಆದರೆ, ಆಕೆಯ ಕನಸು ನನಸಾಗಲೇ ಇಲ್ಲ’’ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.




    #dakshinakannada
    Previous Articleಮಂಗಳೂರು ವಿಮಾನ ನಿಲ್ದಾಣದಲ್ಲೇ ಚಿನ್ನ ಕಳ್ಳಸಾಗಣೆ ಜಾಲ ಪತ್ತೆ; ಹೊರಗುತ್ತಿಗೆ ಸಿಬ್ಬಂದಿ ಸೇರಿ ಮೂವರ ಬಂಧನ, ₹2 ಕೋಟಿ ಮೌಲ್ಯದ ಚಿನ್ನ ವಶಕ್ಕೆ
    Next Article ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ; ಇದೀಗ ಗಡಿಪಾರು ಪ್ರಕ್ರಿಯೆ ಆರಂಭ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.