Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ; ಇದೀಗ ಗಡಿಪಾರು ಪ್ರಕ್ರಿಯೆ ಆರಂಭ
    ಅಪರಾಧ

    ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ; ಇದೀಗ ಗಡಿಪಾರು ಪ್ರಕ್ರಿಯೆ ಆರಂಭ

    adminBy adminNovember 26, 2026No Comments2 Mins Read

    ಉಡುಪಿ: ಮಲ್ಪೆ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳ ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಂಡಿದ್ದು, ಇದೀಗ ಅವರನ್ನು ಭಾರತದಿಂದ ಗಡಿಪಾರು ಮಾಡುವ ಪ್ರಕ್ರಿಯೆಗೆ ಪೊಲೀಸ್ ಇಲಾಖೆ ಮುಂದಾಗಿದೆ.

    2024ರ ಅಕ್ಟೋಬರ್ 11ರಂದು ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿತ್ತು.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಹತ್ತು ಮಂದಿ ಆರೋಪಿಗಳಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿತ್ತು.

    ಅದರಂತೆ ಆರೋಪಿಗಳು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಪ್ರಾಥಮಿಕವಾಗಿ ಬಂಧನದಲ್ಲಿದ್ದು, ಬಳಿಕ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸಿದ್ದರು. ಅವರ ಶಿಕ್ಷೆಯ ಅವಧಿ 2026ರ ಅಕ್ಟೋಬರ್ 10ರಂದು ಪೂರ್ಣಗೊಂಡಿದೆ. ಬಾಂಗ್ಲಾದೇಶದ ಪ್ರಜೆಗಳನ್ನು ಅವರ ತಾಯ್ನಾಡಿಗೆ ಗಡಿಪಾರು ಮಾಡುವ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹಾಗೂ ಬೆಂಗಳೂರಿನ ಶಾಂತಿನಗರದಲ್ಲಿರುವ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ 10 ಮಂದಿಯನ್ನು ಗಡಿಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಮಾಂಡೆಂಟ್ ಹಾಗೂ ನೋಡಲ್ ಅಧಿಕಾರಿಯ ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

    ಈ ಹಿನ್ನೆಲೆಯಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯ್ಕ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಬೆಂಗಾವಲಿನಲ್ಲಿ ಉಡುಪಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತೆರಳಿ, ಅಲ್ಲಿಂದ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಕರೆದೊಯ್ಯುವ ಪ್ರಕ್ರಿಯೆ ಆರಂಭಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ಜಿಲ್ಲಾ ವಿದೇಶಿಯರ ನೋಂದಣಾಧಿಕಾರಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ವಿಶೇಷ ವಿಭಾಗದ ಪೊಲೀಸ್ ನಿರೀಕ್ಷಕ ಹರೀಶ್ ಆರ್., ಎಎಸ್‌ಐ ಪ್ರದೀಪ್, ಜಿಲ್ಲಾ ವಿದೇಶಿಯರ ವಿಭಾಗದ ಅಮರ್ ಕುಮಾರ್ ಮತ್ತು ಮೈತ್ರಿ ಅವರು ಕಾರ್ಯಾಚರಣೆಗೆ ಸಹಕರಿಸಿದ್ದಾರೆ.




    #crime #udupi
    Previous Articleಮಂಗಳೂರು: ಪಂಪ್‌ವೆಲ್ ಬಳಿ ಬಳಿ ಬೈಕ್ ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
    Next Article ಮೂಡುಬಿದಿರೆ: ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಕಾರು ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ, 7,500 ರೂ. ದಂಡ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.