ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಇಂಡುವಾಳು ಗ್ರಾಮದ ಬಳಿ ಭೀಕರ ಅಪಘಾತಸಂಭವಿಸಿದ್ದು, ಜಲ್ಲಿ ತುಂಬಿದ್ದ ಟಿಪ್ಪರ್ಗೆ ಥಾರ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಕೇರಳ ಮೂಲದ ಲಿಫೈಲ್ ಹಾಗೂ ಮತ್ತೊಬ್ಬ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೇರಳ ಮೂಲದ ಬಾಸಿಲ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಗೆ ಆರ್ಟಿಒ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








