ನವದೆಹಲಿ(reporterkarnataka.com): ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ ‘ಮೋದಿ, ಮೋದಿ!’ ಎಂಬ ಘೋಷಣೆಗಳು ಪ್ರತಿಧ್ವನಿಸಿತು. ಪ್ರಧಾನಿ ಮೋದಿ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಇಂದು ಐತಿಹಾಸಿಕ ಮತ್ತು ಅಭೂತಪೂರ್ವ ದಿನ ಎಂದ ಅವರು ಈ ಗೆಲುವಿಗೆ ಕಾರಣರಾದ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದರು.ನವದೆಹಲಿ(reporterkarnataka.com): ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ ‘ಮೋದಿ, ಮೋದಿ!’ ಎಂಬ ಘೋಷಣೆಗಳು ಪ್ರತಿಧ್ವನಿಸಿತು. ಪ್ರಧಾನಿ ಮೋದಿ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಇಂದು ಐತಿಹಾಸಿಕ ಮತ್ತು ಅಭೂತಪೂರ್ವ ದಿನ ಎಂದ ಅವರು ಈ ಗೆಲುವಿಗೆ ಕಾರಣರಾದ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದರು.

1 Comment
Nice