Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಪಾರ್ಕಿಂಗ್ ಸಮಸ್ಯೆ ತೀವ್ರ: ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ದಂಡ ವಸೂಲಿ
    ಕರಾವಳಿ ಸುದ್ದಿ

    ಪಾರ್ಕಿಂಗ್ ಸಮಸ್ಯೆ ತೀವ್ರ: ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ದಂಡ ವಸೂಲಿ

    adminBy adminJune 25, 2026No Comments1 Min Read

    ಮಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.

    ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ. ನಗರದ ವಿವಿಧೆಡೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸಿರುವುದು ಕಂಡು ಬರುತ್ತಿದೆ. ನಗರದ ಪ್ರಮುಖ ಸ್ಥಳವಾದ ಎಂಜಿ ರಸ್ತೆಯಲ್ಲೂ ಹಲವೆಡೆ ಫುಟ್‌ಪಾತ್ ಪಾರ್ಕಿಂಗ್‌ನಿಂದ ಸಮಸ್ಯೆಯಾಗುತ್ತಿದೆ. ಕದ್ರಿ, ಶಿವಭಾಗ್ ಜಂಕ್ಷನ್, ಸೆಂಟ್ ಆಗ್ನೆಸ್, ಫಲ್ನೀರ್, ಪಾಂಡೇಶ್ವರ, ಬಲ್ಲಾಳ್ ಬಾಗ್‌ನಿಂದ ವೇರ್‌ಹೌಸ್ ರಸ್ತೆ, ಉರ್ವ ಮಾರ್ಕೆಟ್ ರಸ್ತೆ, ಕೆ.ಎಸ್. ರಾವ್ ರಸ್ತೆ, ಬಿಟಿ ರಸ್ತೆ, ರಥಬೀದಿ ಮೊದಲಾದ ಕಡೆಗಳಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸಿ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವುದು ಕಂಡು ಬರುತ್ತಿದೆ.

    ನಗರದಲ್ಲಿ ಕೆಲವು ಶಾಪಿಂಗ್ ಕಾಂಪ್ಲೆಕ್ಸ್‌ಗಳು ಹಾಗೂ ವಾಣಿಜ್ಯ ಕಟ್ಟಡಗಳಿಗೆ ಬರುವ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಕಾರಣ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳಿಗೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಕಟ್ಟಡಗಳ ಮಾಲೀಕರಿಗೆ ಸಾಕಷ್ಟು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸಂಚಾರ ವಿಭಾಗದ ಡಿಸಿಪಿಯವರಾದ ಕೆ. ರವಿಶಂಕರ್ ತಿಳಿಸಿದ್ದಾರೆ.




    #dakshinakannada
    Previous Articleದೇರಳಕಟ್ಟೆ: ಚಾಲಕನಿಗೆ ಲೋ ಬಿಪಿ, ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತ ಖಾಸಗಿ ಬಸ್
    Next Article ಎಕ್ಕೂರು ಮೇಲ್ಸೇತುವೆಯಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಯುವಕ ಸಾವು

    Related Posts

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್‌ಗಿರಿ ಆರೋಪ; ಕಾಂಗ್ರೆಸ್‌ ಮುಖಂಡ ಸೇರಿ ಮೂವರ ವಿರುದ್ಧ FIR

    September 3, 2026

    ಫಾತಿಮಾ ನಿಶಾನ ಹತ್ಯೆ ಪ್ರಕರಣ: ಅತ್ತೆ–ನಾದಿನಿಗೆ ಕೋರ್ಟ್‌ನಿಂದ ಜಾಮೀನು

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.