Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಕೊಲ್ಲಂ ದುರಂತ: ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಉರುಳಿದ ಮರಳು, ಮೂವರು ಬಲಿ
    ರಾಷ್ಟ್ರೀಯ

    ಕೊಲ್ಲಂ ದುರಂತ: ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಉರುಳಿದ ಮರಳು, ಮೂವರು ಬಲಿ

    adminBy adminJune 25, 2026No Comments2 Mins Read

    ಕೊಲ್ಲಂ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸ್ಥಳೀಯರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಡುವತ್ತೂರಿನ ನೀಲೇಶ್ವರಂನ ಮುಕ್ಕೋಣಿಮುಕ್ಕು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 7.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಲಾರಿಯಲ್ಲಿದ್ದ ಭಾರಿ ಪ್ರಮಾಣದ ಮರಳು ಬಸ್ ನಿಲ್ದಾಣದ ಮೇಲೆ ಉರುಳಿ ಬಿದ್ದಿದ್ದರಿಂದ, ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಮರಳಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿದ್ದರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

    ಅಪಘಾತದಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ. ಮೃತ ಮೂವರನ್ನು ಹರಿಲಾಲ್ (52), ಪಾರ್ಥಿಪ್ (15) ಮತ್ತು ಅಜಯ ಕುಮಾರ್ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಟ್ಟಾರಕ್ಕರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಾಯಗಳು ಗಂಭೀರವಾಗಿಲ್ಲ.

    ಕೊಟ್ಟಾರಕ್ಕರ ಅಗ್ನಿಶಾಮಕ ದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯು ಮುಕ್ಕೋಣಿಮುಕ್ಕು ಜಂಕ್ಷನ್‌ನಲ್ಲಿ ಬೈಕೊಂದನ್ನು ಹಿಂದಿಕ್ಕಲು (Overtake) ಯತ್ನಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ರಸ್ತೆ ಬದಿಯ ನಿವಾಸಿಯೊಬ್ಬರ ಮನೆಯ ಗೋಡೆಗೆ ಹೊಂದಿಕೊಂಡಿದ್ದ ಬಸ್ ನಿಲ್ದಾಣಕ್ಕೆ ನೇರವಾಗಿ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಮರಳು ಇಡೀ ನಿಲ್ದಾಣದ ಮೇಲೆ ಸುರಿದಿದೆ. ಅಪಘಾತಕ್ಕೆ ಕಾರಣವಾದ ಬೈಕ್ ಸವಾರ ಪ್ರಸ್ತುತ ನಾಪತ್ತೆಯಾಗಿದ್ದು, ಪೊಲೀಸರು ಆತನ ಪತ್ತೆಗಾಗಿ ಜಾಲ ಬೀಸಿದ್ದಾರೆ.

    “ಮುಕ್ಕೋಣಿಮುಕ್ಕು ಪ್ರದೇಶದಲ್ಲಿ ಮುಂಜಾನೆ ಶಾಲೆ, ಕಾಲೇಜು ಹಾಗೂ ಟ್ಯೂಷನ್‌ಗೆ ಹೋಗುವ ವಿದ್ಯಾರ್ಥಿಗಳ ಸಂಚಾರ ಹೆಚ್ಚಿರುತ್ತದೆ. ಅಪಘಾತದ ಸಮಯದಲ್ಲಿ ಒಂಬತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 12 ಜನರು ನಿಲ್ದಾಣದಲ್ಲಿದ್ದರು. ಸಾಮಾನ್ಯವಾಗಿ ಬರುವ ಖಾಸಗಿ ಬಸ್ ಕೆಲವು ನಿಮಿಷ ತಡವಾಗಿದ್ದೇ ಈ ದುರಂತಕ್ಕೆ ಕಾರಣವಾಯಿತು. ಲಾರಿ ನಿಯಂತ್ರಣ ತಪ್ಪಿ ಮರಳು ಬೀಳುವುದನ್ನು ಗಮನಿಸಿದ ಕೆಲವು ಶಾಲಾ ಮಕ್ಕಳು ತಕ್ಷಣವೇ ಅಲ್ಲಿಂದ ಓಡಿಹೋಗಿ ಅಪಾಯದಿಂದ ಪಾರಾಗಿದ್ದಾರೆ” ಎಂದು ತಿಳಿಸಿದ್ದಾರೆ.

    ಘಟನೆ ನಡೆದ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಘಟಕಗಳು ಪೊಲೀಸರು ಮತ್ತು ಸ್ಥಳೀಯರ ನೆರವಿನೊಂದಿಗೆ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮರಳಿನ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಮರಳಿನಡಿ ಸಿಲುಕಿದ್ದವರ ಪೈಕಿ ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
    ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿ, “ಗಾಯಗೊಂಡವರನ್ನು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆ ಮತ್ತು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ರಸ್ತೆ ಬದಿಯಲ್ಲಿದ್ದ ಅಂಗಡಿಯ ಗೋಡೆ ಮತ್ತು ವಿದ್ಯುತ್ ಕಂಬ ಧರಾಶಾಹಿಯಾಗಿದೆ.




    #nation
    Previous Articleಕರಾವಳಿಯಲ್ಲಿ ಮೀನು ಉತ್ಪಾದನೆ ಕುಸಿತ: ಗಗನಕ್ಕೇರಿದ ತಾಜಾ ಮೀನಿನ ಬೆಲೆ
    Next Article ಶವದ ಮೇಲಿದ್ದ ಚಿನ್ನದ ಸರಕ್ಕಾಗಿ ಸಮಾಧಿ ಭೇದಿಸಿದ ಆರೋಪಿಗಳು

    Related Posts

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.