

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ವಿಶೇಷ ವಿಮಾನದ ಮೂಲಕ ಆಗಮಿಸಿದರು. ನಗರದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಷನ್ ಆಯೋಜಿಸಿರುವ “An Evening with Shah Rukh Khan” ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಈ ಕಾರ್ಯಕ್ರಮವು ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದ್ದು, ರೋಹನ್ ಕಾರ್ಪೊರೇಷನ್‌ನ ಹೊಸ ವಸತಿ ಯೋಜನೆ Rohan Marina One ಅನಾವರಣವೂ ಇದೇ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಆಹ್ವಾನಿತ ಅತಿಥಿಗಳು ಹಾಗೂ ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.











