Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಸಿನಿಮೀಯ ಘಟನೆ: ಪೊಲೀಸರ ಕಣ್ಣಿಗೆ ಮಣ್ಣು ಎರಚಿ ಕೈಕೋಳದೊಂದಿಗೆ ಪರಾರಿಯಾದ ಸರಗಳ್ಳ
    ಅಪರಾಧ

    ಮಂಗಳೂರಿನಲ್ಲಿ ಸಿನಿಮೀಯ ಘಟನೆ: ಪೊಲೀಸರ ಕಣ್ಣಿಗೆ ಮಣ್ಣು ಎರಚಿ ಕೈಕೋಳದೊಂದಿಗೆ ಪರಾರಿಯಾದ ಸರಗಳ್ಳ

    adminBy adminJune 27, 2026No Comments1 Min Read

    ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣೆರಚಿ, ಹ್ಯಾಂಡ್‌ಕಫ್ (ಕೋಳ) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿರುವ ಘಟನೆ ಮಂಗಳೂರಿನ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ನಟೋರಿಯಸ್ ಆರೋಪಿ. ಈತನ ಬಂಧನಕ್ಕಾಗಿ ಪೊಲೀಸರು ಇದೀಗ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

    ಮಂಗಳೂರಿನ ಜಪ್ಪಿನಮೊಗರು ಬಳಿ ಇತ್ತೀಚೆಗೆ ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಹತ್ತಿದ್ದ ಮಂಗಳೂರಿನ ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಅಂತರರಾಜ್ಯ ಕಳ್ಳರ ಗ್ಯಾಂಗ್‌ನ ಪಕ್ಕಾ ಮಾಹಿತಿ ಲಭ್ಯವಾಗಿತ್ತು. ಬಾಗಲಕೋಟೆಯ ಅಲ್ತಾಫ್ ಹುಸೇನ್, ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್ ಹಾಗೂ ರವಿ ಬೌರ ಎಂಬಿಬ್ಬರು ಸಹಚರರೊಂದಿಗೆ ಸೇರಿಕೊಂಡು ವಾಹನ ಕಳ್ಳತನ, ಸರಗಳ್ಳತನ ಹಾಗೂ ದರೋಡೆ ಎಸಗುತ್ತಿದ್ದ ಗ್ಯಾಂಗ್ ಕಟ್ಟಿಕೊಂಡಿದ್ದ. ಕೃತ್ಯ ಎಸಗಿದ ತಕ್ಷಣ ಈ ಗ್ಯಾಂಗ್ ನಗರ ಬಿಟ್ಟು ಪರಾರಿಯಾಗುತ್ತಿತ್ತು. ಹೈದರಾಬಾದ್, ಬಾಗಲಕೋಟೆ, ಗದಗ್ ಸೇರಿದಂತೆ ಹಲವು ನಗರಗಳಲ್ಲಿ ಈ ಗ್ಯಾಂಗ್ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿವೆ.

    ಖತರ್ನಾಕ್ ಗ್ಯಾಂಗ್ ಮಂಗಳೂರಿನ ಮೀನುಗಾರಿಕಾ ದಕ್ಕೆಗೆ ಬಂದಿರುವ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಠಾಣೆಯ ಐವರು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಮೂವರನ್ನೂ ಬಂಧಿಸಿತ್ತು. ಆದರೆ, ಆರೋಪಿಗಳನ್ನು ಹ್ಯಾಂಡ್‌ಕಫ್ ಹಾಕಿ ಠಾಣೆಗೆ ಕರೆತರುತ್ತಿದ್ದಾಗ ರೋಜಾರಿಯೋ ಚರ್ಚ್ ರಸ್ತೆಯ ಬಳಿ ಅಲ್ತಾಫ್ ಹುಸೇನ್ ಪೊಲೀಸರನ್ನು ಜೋರಾಗಿ ತಳ್ಳಿ, ಕೈಗೆ ಹಾಕಿದ್ದ ಕೋಳದೊಂದಿಗೇ ಓಟ ಕಿತ್ತಿದ್ದಾನೆ. ಇದೇ ವೇಳೆ ಉಳಿದಿಬ್ಬರು ಸಹಚರರಾದ ಮಹಮ್ಮದ್ ಸಿದ್ದಿಕ್ ಮತ್ತು ರವಿ ಬೌರ ಕೂಡ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ, ಪೊಲೀಸರು ಹರಸಾಹಸ ಪಟ್ಟು ಅವರಿಬ್ಬರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಅಲ್ತಾಫ್ ಹುಸೇನ್ ಕೈಕೋಳದ ಸಮೇತ ಸಾರ್ವಜನಿಕ ರಸ್ತೆಯಲ್ಲಿ ಓಡುತ್ತಿರುವ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ತಲೆಮರೆಸಿಕೊಂಡಿರುವ ಈತನ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

    ಪೊಲೀಸ್ ಪ್ರಕಟಣೆ: ಪರಾರಿಯಾಗಿರುವ ಆರೋಪಿ ಅಲ್ತಾಫ್ ಹುಸೇನ್ ಕುರಿತು ಸಾರ್ವಜನಿಕರಿಗೆ ಯಾವುದೇ ಸುಳಿವು ಸಿಕ್ಕಲ್ಲಿ ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ, ತನಿಖೆಗೆ ಸಹಕರಿಸಬೇಕಾಗಿ ಮಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.




    #crime #dakshinakannada
    Previous Articleಕಾರ್ಕಳ–ಹೆಬ್ರಿ ಪ್ರದೇಶದಲ್ಲಿ ಚಿರತೆ ಸಂಚಾರ; ಅರಣ್ಯ ಇಲಾಖೆ ಕ್ರಮಕ್ಕೆ ಒತ್ತಾಯ
    Next Article ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್: ವಿಟ್ಲ ಪೊಲೀಸರಿಂದ ವ್ಯಕ್ತಿಯ ಬಂಧನ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.