ಉಪ್ಪಿನಂಗಡಿ:16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಕ್ರ 09/2005, ಕಲಂ 457, 380 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದನು. ಬಳಿಕ ಆತ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಕ್ರಮ ಕೈಗೊಂಡಿದ್ದರು.
ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ಗಳಾದ ಎಚ್ಸಿ 826 ಹಾಗೂ ಎಚ್ಸಿ 331 ಅವರು ಕೃಷ್ಣ ನಗರ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.








