ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು 29.06.2026ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯರಾದ ಶ್ರೀ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭಾಶಯಗಳನ್ನು ಕೋರಿದರು.

ಇದೇ ಸಂದರ್ಭದಲ್ಲಿ ಯುಪಿಎ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ಶ್ರೀಮತಿ ರಾಧಾ ಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾರಂಭದ ಗೌರವವನ್ನು ಹೆಚ್ಚಿಸಿದರು.








