Close Menu
    What's Hot

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ; ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿ.ಸಿ
    Uncategorized

    ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ; ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿ.ಸಿ

    adminBy adminJune 30, 2026No Comments2 Mins Read

    ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು. ಇದರ ಅಂಗವಾಗಿ ಜಿಲ್ಲೆಯಾದ್ಯಂತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದರು.

    ಜಿಲ್ಲೆಯ 1,876 ಮತಗಟ್ಟೆಗಳಲ್ಲಿ ನಿಯೋಜಿತವಾಗಿರುವ ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಹಸ್ತಾಂತರಿಸುತ್ತಿದ್ದಾರೆ. ಮತದಾರರ ವಿವರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಮುಂದಿನ ಹಂತದಲ್ಲಿ ಭರ್ತಿ ಮಾಡಿದ ನಮೂನೆಗಳನ್ನು ಅಧಿಕಾರಿಗಳು ಸಂಗ್ರಹಿಸಲಿದ್ದಾರೆ.

    ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮಂಗಳೂರು ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಸ್ವತಃ ಗಣತಿ ನಮೂನೆಗಳನ್ನು ವಿತರಿಸಿದರು. ಅಲ್ಲದೆ, ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.

    ಜಿಲ್ಲೆಯ ಹಲವು ಭಾಗಗಳಲ್ಲಿ ಹಿರಿಯ ಅಧಿಕಾರಿಗಳೂ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗಡೆ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ನಿವಾಸಗಳಿಗೂ ಅಧಿಕಾರಿಗಳು ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿದರು. ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆ ನೀಡಿ ಅವರ ಮನೆಗಳಲ್ಲಿಯೇ ಅರ್ಜಿಗಳನ್ನು ತಲುಪಿಸಲಾಯಿತು.

    ಮತದಾರರಿಗೆ ಎರಡು ಪ್ರತಿಗಳಲ್ಲಿ ಗಣತಿ ನಮೂನೆ ನೀಡಲಾಗುತ್ತಿದೆ. ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ಬಳಿಕ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಂಡು, ಇನ್ನೊಂದು ಪ್ರತಿಯನ್ನು ಬಿಎಲ್‌ಒಗಳಿಗೆ ಹಿಂತಿರುಗಿಸಬೇಕು. ಅರ್ಜಿ ಭರ್ತಿ ಮಾಡಲು ಹಾಗೂ 2002ರ ಮತದಾರರ ಪಟ್ಟಿಯ ವಿವರಗಳನ್ನು ಪರಿಶೀಲಿಸಲು ನೆರವಾಗುವ ಉದ್ದೇಶದಿಂದ ಪ್ರತಿಯೊಂದು ಮತಗಟ್ಟೆಯಲ್ಲೂ ಮತದಾರರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 18,05,189 ನೋಂದಾಯಿತ ಮತದಾರರಿದ್ದಾರೆ.

    ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ಮಾಡಲು ಮಾನ್ಯತೆ ಪಡೆದ ಎಲ್ಲ ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

    ಮನೆ ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಈಗಿನ ಮತದಾರರ ಪಟ್ಟಿಯಲ್ಲಿರುವ ಹೆಸರು, ಮತಗಟ್ಟೆ ಸಂಖ್ಯೆ ಹಾಗೂ ವಿಧಾನಸಭಾ ಕ್ಷೇತ್ರದ ವಿವರಗಳು ಅರ್ಜಿಯಲ್ಲಿ ಈಗಾಗಲೇ ಮುದ್ರಿತವಾಗಿದ್ದು, ಹಳೆಯ ಫೋಟೋ ಇದ್ದಲ್ಲಿ ಹೊಸ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವ ಅವಕಾಶವೂ ಇದೆ.

    ಮನೆ ಮನೆಗೆ ಭೇಟಿ ನೀಡುವ ಕಾರ್ಯ ಜುಲೈ 29ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ತಿದ್ದುಪಡಿ ಅರ್ಜಿಗಳನ್ನು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸಲಾಗುತ್ತದೆ.

    ಇದೇ ವೇಳೆ, ಗಣತಿ ನಮೂನೆ ವಿತರಿಸಲಾದ ಮನೆಗಳಿಗೆ ನೇರಳೆ ಬಣ್ಣದ ಸ್ಟಿಕ್ಕರ್ ಅಂಟಿಸಲಾಗುತ್ತಿದ್ದು, ಭೇಟಿ ವೇಳೆ ಮನೆ ಬೀಗ ಹಾಕಿರುವುದಾದರೆ ಕೆಂಪು ಬಣ್ಣದ ಸ್ಟಿಕ್ಕರ್ ಅಂಟಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ.




    #dakshinakannada
    Previous Articleಬಹುಕೋಟಿ ಬ್ಯಾಂಕ್ ಹಗರಣಕ್ಕೆ ಹೊಸ ತಿರುವು; ಅಧ್ಯಕ್ಷ ಬಸನಗೌಡ ನೇಣಿಗೆ ಶರಣು
    Next Article ನಾಗುರಿಯಲ್ಲಿ ಮಳೆ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಮೂವರು ಬಲಿ

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.