ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ.

ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಕೂಲಂಕುಶ ತನಿಖೆ ನಡೆಸುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಕೊಲೆ ನಡೆದಿದೆಯೇ ಎಂಬುದು ಸ್ಪಷ್ಟವಾಗಲಿದೆ.








