Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮನೆಯೊಳಗೆ ಆಕಸ್ಮಿಕ ಬೆಂಕಿ; ಟಿವಿ, ದಾಖಲೆಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
    ಕರಾವಳಿ ಸುದ್ದಿ

    ಮನೆಯೊಳಗೆ ಆಕಸ್ಮಿಕ ಬೆಂಕಿ; ಟಿವಿ, ದಾಖಲೆಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

    adminBy adminJuly 2, 2026No Comments1 Min Read

    ಉಪ್ಪಿನಂಗಡಿ: ಮಠ ನಿವಾಸಿ ಆದಂ ಅವರ ಮನೆಯಲ್ಲಿ ಬುಧವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

    ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಟಿ.ವಿ., ವಿವಿಧ ವಿದ್ಯುತ್ ಉಪಕರಣಗಳು, ಕಪಾಟು, ಬಟ್ಟೆ, ಅಗತ್ಯ ದಾಖಲೆ ಪತ್ರಗಳು ಹಾಗೂ ಮನೆಯ ವಿದ್ಯುತ್ ಸಂಪರ್ಕದ ವೈರ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆಯಿಂದ ಸುಮಾರು ರೂ. 3 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆ ನಡೆದ ವೇಳೆ ಮನೆಯ ಮಾಲೀಕ ಆದಂ ಅವರು ತಮ್ಮ ಪತ್ನಿಯನ್ನು ಔಷಧಕ್ಕಾಗಿ ಉಪ್ಪಿನಂಗಡಿಗೆ ಕರೆದುಕೊಂಡು ಹೋಗಿದ್ದರು. ಅವರೊಂದಿಗೆ ಪುತ್ರಿಯೂ ತೆರಳಿದ್ದರು. ಆ ಸಮಯದಲ್ಲಿ ಶಾಲೆಯಿಂದ ಬಂದಿದ್ದ ಮೊಮ್ಮಕ್ಕಳು ಮಾತ್ರ ಮನೆಯಲ್ಲಿ ಇದ್ದರು.

    ಮನೆಯೊಳಗೆ ಹೊಗೆ ಮತ್ತು ಬೆಂಕಿ ಕಾಣಿಸುತ್ತಿದ್ದಂತೆ ಮಕ್ಕಳು ತಕ್ಷಣ ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲೇ ಮನೆಯೊಳಗಿನ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.




    #dakshinakannada
    Previous Articleಭಾರತಕ್ಕೆ ಜಪಾನ್ ಪ್ರಧಾನಿ ತಕೈಚಿ ಆಗಮನ; ದ್ವಿಪಕ್ಷೀಯ ಸಂಬಂಧ ಬಲಪಡಿಸುವತ್ತ ಮಹತ್ವದ ಹೆಜ್ಜೆ
    Next Article ದಕ್ಷಿಣ ಕನ್ನಡದಲ್ಲಿ ಭೂಕುಸಿತ ಭೀತಿ ಹೆಚ್ಚಳ: 88 ಪ್ರದೇಶಗಳು ಡೇಂಜರ್ ಝೋನ್‌, ಜಿಲ್ಲಾಡಳಿತದಿಂದ ಎಚ್ಚರಿಕೆ

    Related Posts

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.