Close Menu
    What's Hot

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕಂಕನಾಡಿ ದುರಂತ: ಕಣ್ಣೆದುರೇ ಆಟವಾಡಿದ ಕಂದಮ್ಮಗಳಿಗೆ ಕಣ್ಣೀರಿನ ವಿದಾಯ
    ಕರಾವಳಿ ಸುದ್ದಿ

    ಕಂಕನಾಡಿ ದುರಂತ: ಕಣ್ಣೆದುರೇ ಆಟವಾಡಿದ ಕಂದಮ್ಮಗಳಿಗೆ ಕಣ್ಣೀರಿನ ವಿದಾಯ

    adminBy adminJuly 3, 2026No Comments1 Min Read

    ಮಂಗಳೂರು: ಕಂಕನಾಡಿ ನಾಗುರಿ ಪ್ರದೇಶದಲ್ಲಿ ಕಂಪೌಂಡ್ ವಾಲ್ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಇಬ್ಬರು ಪುಟ್ಟ ಮಕ್ಕಳಿಗೆ ಗುರುವಾರ ನಂದಿಗುಡ್ಡೆ ರುದ್ರಭೂಮಿಯಲ್ಲಿ ಕಣ್ಣೀರಿನ ವಿದಾಯ ಹೇಳಲಾಯಿತು. ಕುಟುಂಬಸ್ಥರ ಆಕ್ರಂದನ, ಬಂಧು-ಬಳಗ ಹಾಗೂ ಸ್ಥಳೀಯರ ದುಃಖದ ನಡುವೆ ಅಂತ್ಯಕ್ರಿಯೆ ನೆರವೇರಿತು.

    ದುರಂತದಲ್ಲಿ ಮೃತಪಟ್ಟ 8 ವರ್ಷದ ಅನಾಮಿಕ ಚೌರಾಸಿಯ ಹಾಗೂ 4 ವರ್ಷದ ಪರಿ (ತನು) ಅವರ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೂ ಮುನ್ನ ನಾಗುರಿಯಲ್ಲಿರುವ ನಿವಾಸಕ್ಕೆ ತರಲಾಗಿತ್ತು. ಸಾರ್ವಜನಿಕರು ಮತ್ತು ಸ್ಥಳೀಯ ನಿವಾಸಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೂರಾರು ಮಂದಿ ಆಗಮಿಸಿ ಮಕ್ಕಳಿಗೆ ಅಂತಿಮ ನಮನ ಸಲ್ಲಿಸಿದರು.

    ಇನ್ನೇನು ಕೆಲವೇ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮಗಳನ್ನು ಜೀವವಿಲ್ಲದ ಸ್ಥಿತಿಯಲ್ಲಿ ಕಂಡು ಸ್ಥಳೀಯರು ಭಾವುಕರಾದರು. ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ರೋಧನ ಇಡೀ ವಾತಾವರಣವನ್ನು ಮೌನದಲ್ಲಿ ಮುಳುಗಿಸಿತು.

    ಮೃತ ಮಕ್ಕಳ ಮನೆ ಸಮೀಪದಲ್ಲೇ ಇರುವ ಕಂಕನಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಕರ್ತವ್ಯದ ನಡುವೆಯೂ ಮಕ್ಕಳ ಅಕಾಲಿಕ ಸಾವಿಗೆ ಮರುಗಿದ ಪೊಲೀಸರು ಕಣ್ಣೀರಿನ ನಮನ ಸಲ್ಲಿಸಿದರು.

    ಬಳಿಕ ಬಂಧು-ಬಳಗ, ಸ್ಥಳೀಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ನಂದಿಗುಡ್ಡೆ ಚಿತಾಗಾರದಲ್ಲಿ ಇಬ್ಬರು ಮಕ್ಕಳ ಅಂತ್ಯಸಂಸ್ಕಾರವನ್ನು ನಡೆಸಲಾಯಿತು.

     




    #dakshinakannada
    Previous Articleಬೀದಿ ವ್ಯಾಪಾರಿಗಳಿಗೆ ಹೊಸ ನಿಯಮ: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ
    Next Article ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿ; ಮೂವರು ಆರೋಪಿಗಳ ಬಂಧನ

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.