Close Menu
    What's Hot

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಡ್ಯದಲ್ಲಿ ಉದ್ಯಮಿ ಪುತ್ರನ ಗ್ಯಾಂಗ್‌ನಿಂದ ಲಾರಿ ಚಾಲಕನ ಮೇಲೆ ಗುಂಡು ಹಾರಿಸಿ ದರೋಡೆಗೆ ಯತ್ನ
    ಅಪರಾಧ

    ಮಂಡ್ಯದಲ್ಲಿ ಉದ್ಯಮಿ ಪುತ್ರನ ಗ್ಯಾಂಗ್‌ನಿಂದ ಲಾರಿ ಚಾಲಕನ ಮೇಲೆ ಗುಂಡು ಹಾರಿಸಿ ದರೋಡೆಗೆ ಯತ್ನ

    adminBy adminJuly 3, 2026Updated:July 3, 2026No Comments2 Mins Read

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಯುವಕರ ಪುಂಡಾಟಿಕೆ ಹಾಗೂ ರೌಡಿಸಂ ದಿನದಿಂದ ದಿನಕ್ಕೆ ಮಿತಿಮೀರುತ್ತಿರುವುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಐಷಾರಾಮಿ ಕಾರಿನಲ್ಲಿ ಬಂದ ಮಂಡ್ಯದ ಪ್ರಭಾವಿ ಉದ್ಯಮಿಯೊಬ್ಬರ ಪುತ್ರ ಮತ್ತು ಆತನ ಗ್ಯಾಂಗ್, ಲಾರಿ ಚಾಲಕನ ಮೇಲೆ ಗನ್‌ನಿಂದ ಗುಂಡು ಹಾರಿಸಿ ದರೋಡೆಗೆ ಯತ್ನಿಸಿರುವುದು ದೃಢಪಟ್ಟಿದೆ. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೀಕರ ಕೃತ್ಯ ನಡೆದಿದ್ದು, ತಡರಾತ್ರಿ ಪೊಲೀಸರು ಉದ್ಯಮಿ ಪುತ್ರನನ್ನು ವಶಕ್ಕೆ ಪಡೆದು ಡಿವೈಎಸ್‌ಪಿ (DySP) ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಲಾರಿ ನಿಲ್ಲಿಸದಿದ್ದಕ್ಕೆ ಗುಂಡಿನ ದಾಳಿ!

    ಮೈಸೂರು ಮೂಲದ ಚಾಲಕ ಶಂಕರ್ ಎಂಬುವವರು ಬೆಂಗಳೂರಿನಿಂದ ಔಷಧಗಳನ್ನು ತುಂಬಿಕೊಂಡು ಒಂಟಿಯಾಗಿ ಕಂಟೇನರ್ ಲಾರಿಯಲ್ಲಿ ಮಂಡ್ಯದ ಕಡೆಗೆ ಬರುತ್ತಿದ್ದರು. ಮುಂಜಾನೆ 4 ಗಂಟೆ ಸುಮಾರಿಗೆ ಹಳೇ ಹೆದ್ದಾರಿಯಲ್ಲಿ ಕಂಟೇನರ್ ಅನ್ನು ಅಡ್ಡಗಟ್ಟಲು ಉದ್ಯಮಿ ಪುತ್ರ ಹಾಗೂ ಆತನ ಗ್ಯಾಂಗ್ ಪ್ರಯತ್ನಿಸಿದೆ. ಆದರೆ, ಒಂಟಿಯಾಗಿದ್ದ ಚಾಲಕ ಶಂಕರ್ ಭಯದಿಂದ ಲಾರಿಯನ್ನು ನಿಲ್ಲಿಸದೇ ಮುನ್ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ಯಮಿ ಪುತ್ರ, ಲಾರಿಯತ್ತ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಭಯದ ಕಾರಣ ಪೊಲೀಸರಿಗೂ ಮಾಹಿತಿ ನೀಡದೆ ಅಲ್ಲಿಂದ ಹೊರಟುಹೋಗಿದ್ದರು.

    ಜನರಿಂದ ಹರಡಿದ ಸುದ್ದಿ: ಎಚ್ಚೆತ್ತ ಪೊಲೀಸರು

    ಹೆದ್ದಾರಿಯಲ್ಲಿ ನಡೆದ ಈ ಶೂಟೌಟ್ ಬಗ್ಗೆ ಸಾರ್ವಜನಿಕರಲ್ಲಿ ಬಾಯಿಂದ ಬಾಯಿಗೆ ಸುದ್ದಿ ಹರಡುತ್ತಿದ್ದಂತೆ ಎಚ್ಚೆತ್ತ ಮಂಡ್ಯ ಗ್ರಾಮಾಂತರ ಪೊಲೀಸರು, ತಕ್ಷಣವೇ ಲಾರಿ ಚಾಲಕ ಶಂಕರ್‌ನನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿ ಅಧಿಕೃತ ದೂರು ದಾಖಲಿಸಿಕೊಂಡಿದ್ದಾರೆ. ತದನಂತರ ತೀವ್ರ ಕಾರ್ಯಾಚರಣೆ ನಡೆಸಿ ಪ್ರಭಾವಿ ಉದ್ಯಮಿಯ ಪುತ್ರನನ್ನು ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಸದ್ಯ ಮಂಡ್ಯ ಡಿವೈಎಸ್‌ಪಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ಮುಂದುವರಿದಿದ್ದು, ಮುಂಜಾನೆ 4 ಗಂಟೆಗೆ ಐಷಾರಾಮಿ ಕಾರಿನಲ್ಲಿ ಈ ಗ್ಯಾಂಗ್ ಹೈವೇಯಲ್ಲಿ ನಿಂತು ಏನು ಮಾಡುತ್ತಿತ್ತು? ದರೋಡೆಗೆ ಸಂಚು ರೂಪಿಸಿತ್ತೇ? ಎಂಬ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

    ಲೈಸೆನ್ಸ್ ಇಲ್ಲದೆ ಗನ್ ಸಿಕ್ಕಿದ್ದು ಹೇಗೆ?

    ಈ ಕೃತ್ಯಕ್ಕೆ ಉದ್ಯಮಿ ಪುತ್ರ ಅಕ್ರಮವಾಗಿ ಗನ್ ಬಳಸಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಆತನ ಬಳಿ ಯಾವುದೇ ಅಧಿಕೃತ ಗನ್ ಲೈಸೆನ್ಸ್ ಇರಲಿಲ್ಲ ಎಂಬುದು ಪತ್ತೆಯಾಗಿದೆ. ಪರವಾನಗಿ ಇಲ್ಲದಿದ್ದರೂ ಪ್ರಭಾವಿ ವ್ಯಕ್ತಿಯ ಮಗನಿಗೆ ಈ ಮಾರಕ ಆಯುಧ ಸಿಕ್ಕಿದ್ದು ಹೇಗೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

    ಮಂಡ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದ್ದು, ಇಂತಹ ಕೃತ್ಯಗಳು ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ಯಾಂಗ್‌ನ ಇತರ ಸದಸ್ಯರಿಗಾಗಿ ಹುಡುಕಾಟ ನಡೆದಿದೆ.




    #crime
    Previous Articleಬ್ರಹ್ಮಾವರದ ಅಪ್ರಾಪ್ತ ಬಾಲಕನ ಅಪಹರಿಸಿ ಕೇರಳದಲ್ಲಿ ಕೂಡಿಹಾಕಿ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
    Next Article ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ ಪ್ರಕ್ರಿಯೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಸೂಚನೆ

    Related Posts

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.