Close Menu
    What's Hot

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ ಪ್ರಕ್ರಿಯೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಸೂಚನೆ
    ಕರ್ನಾಟಕ

    ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ ಪ್ರಕ್ರಿಯೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಸೂಚನೆ

    adminBy adminJuly 3, 2026No Comments1 Min Read

    ರಾಮನಗರ: ಕಲ್ಯಾಣ ಮಂಟಪವೊಂದರಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿ ಗೆ ಖಡಕ್ ಸೂಚನೆ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

    ಕರ್ನಾಟಕದಲ್ಲಿ ಸದ್ಯ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ರಮ ನಡೆಯುತ್ತಿದೆ. ನಿಯಮಗಳ ಪ್ರಕಾರ, ಬಿಎಲ್‌ಒಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಬೇಕು ಹಾಗೂ ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ರಾಮನಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 23ರ ಟಿಪ್ಪು ನಗರ ಕಲ್ಯಾಣ ಮಂಟಪವೊಂದರಲ್ಲಿ ಬಿಎಲ್‌ಒಗಳು ಮನೆ ಮನೆಗೆ ಹೋಗುವ ಬದಲು, ಜನರನ್ನು ಒಂದೇ ಕಡೆ ಸೇರಿಸಿ ‘ಎಸ್‌ಐಆರ್ ಕ್ಯಾಂಪ್’ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದ್ದರು.

    ನಿಯಮ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಕ್ಯಾಂಪ್ ನಡೆಸಿದ ಅಧಿಕಾರಿಗಳನ್ನು ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು. ಈ ವಿಚಾರಣೆಯ ಸಂಪೂರ್ಣ ವರದಿಯನ್ನು ವಿಳಂಬವಿಲ್ಲದೆ ತಮಗೆ ಸಲ್ಲಿಸಬೇಕು ಎಂದು ಡಿಸಿಗೆ ಆದೇಶಿಸಿದ್ದಾರೆ. ನಿಯಮ ಉಲ್ಲಂಘನೆ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಆಯೋಗದ ಮೂಲಗಳು ತಿಳಿಸಿವೆ.

    #karnataka
    Previous Articleಮಂಡ್ಯದಲ್ಲಿ ಉದ್ಯಮಿ ಪುತ್ರನ ಗ್ಯಾಂಗ್‌ನಿಂದ ಲಾರಿ ಚಾಲಕನ ಮೇಲೆ ಗುಂಡು ಹಾರಿಸಿ ದರೋಡೆಗೆ ಯತ್ನ
    Next Article ಕಾರಾಗೃಹದೊಳಗೆ ಮಾದಕ ವಸ್ತು ಎಸೆದ ಆರೋಪಿ ಕೆಎಸ್‌ಐಎಸ್‌ಎಫ್ ಬಲೆಗೆ

    Related Posts

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.