Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಜರ್ಮನಿಯಲ್ಲಿ ಮಂಗಳೂರು ಯುವಕನ ದುರಂತ ಅಂತ್ಯ; ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು
    ಅಂತರಾಷ್ಟ್ರೀಯ

    ಜರ್ಮನಿಯಲ್ಲಿ ಮಂಗಳೂರು ಯುವಕನ ದುರಂತ ಅಂತ್ಯ; ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

    adminBy adminJuly 5, 2026No Comments1 Min Read

    ಬರ್ಲಿನ್ : ಉನ್ನತ ಶಿಕ್ಷಣಕ್ಕಾಗಿ ಜರ್ಮನಿಗೆ ತೆರಳಿದ್ದ ಮಂಗಳೂರು ಮೂಲದ 21 ವರ್ಷದ ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಚಾರಣ ಮುಗಿಸಿ ವಿಹಾರಕ್ಕೆ ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಲೀಪ್‌ಜಿಗ್ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜರ್ಮನಿಯ ಸ್ಥಳೀಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೃತನ ಜೊತೆಯಲ್ಲಿದ್ದ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಂಗಳೂರಿನ ಮರಕಡ-ಕುಂಜತ್‌ಬೈಲ್ ನಿವಾಸಿ ಮೊಹಮ್ಮದ್ ಅನಿಜ್‌ ಅಬೂಬಕ್ಕರ್ (21) ಮೃತಪಟ್ಟ ದುರ್ದೈವಿ ವಿದ್ಯಾರ್ಥಿ. ಈತ ಜರ್ಮನಿಯ ಹಾಲೆಯ ರಹ್ನ್ ಶಿಕ್ಷಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ಪದವಿಯ ಮೂರನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

    ಪೊಲೀಸ್ ಹಾಗೂ ರಾಯಭಾರ ಕಚೇರಿಯ ಮೂಲಗಳ ಪ್ರಕಾರ, ಗುರುವಾರ (ಜೂನ್ 2) ಬೆಳಗ್ಗೆ ಅನಿಜ್ ತನ್ನ ಸಹಪಾಠಿಗಳೊಂದಿಗೆ ಸೇರಿ ಲೀಪ್‌ಜಿಗ್ ಪ್ರಾಂತ್ಯದ ಬಳಿ ಟ್ರಕ್ಕಿಂಗ್ (ಚಾರಣ) ಮಾಡಲು ಹೊರಟಿದ್ದ. ಚಾರಣ ಮುಗಿದ ಬಳಿಕ ಈತ ಹಾಗೂ ಸ್ನೇಹಿತರು ಜೊತೆಗೂಡಿ ಲೀಪ್‌ಜಿಗ್‌ನ ‘ರೆಡ್ ಬುಲ್ ಅರೆನಾ’ ಕ್ರೀಡಾಂಗಣದ ಬಳಿ ಇರುವ ನೀರಿನ ಮನರಂಜನಾ ಪ್ರದೇಶಕ್ಕೆ ವಿಹಾರಕ್ಕಾಗಿ ತೆರಳಿದ್ದರು. ಅಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾಗ ಹಠಾತ್ ಆಗಿ ಅನಿಜ್ ನಾಪತ್ತೆಯಾಗಿದ್ದಾನೆ. ಆತ ಕಾಣೆಯಾಗಿರುವುದು ಬೆಳಕಿಗೆ ಬರುತ್ತಿದ್ದಂತೆ ಆತಂಕಗೊಂಡ ಸ್ನೇಹಿತರು ಲ್ಯಾಂಡೌರ್ ಸೇತುವೆ ಪ್ರದೇಶದ ತುರ್ತು ಸೇವೆಗಳ ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಜರ್ಮನಿಯ ವಿಪತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಭರ್ಜರಿ ಶೋಧ ಕಾರ್ಯ ನಡೆಸಿ, ನೀರಿನಲ್ಲಿ ಮುಳುಗಿದ್ದ ಅನಿಜ್‌ನ ಶವವನ್ನು ಹೊರತೆಗೆದಿವೆ.

    ಮೃತ ಅನಿಜ್ ತಂದೆ ಮರಕಡ ಅಬೂಬಕ್ಕರ್ ಸಿದ್ದಿಕ್ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. ಮಗನ ಸಾವಿನ ಸುದ್ದಿಯಿಂದ ಇಡೀ ಕುಟುಂಬ ಆಘಾತಕ್ಕೆ ಒಳಗಾಗಿದೆ. ಸದ್ಯ ಕುಟುಂಬದ ಪರ ವಕೀಲರಾದ ಪಿ.ಎ. ಹಮೀದ್ ಪಡುಬಿದ್ರಿ ಅವರು ಬರ್ಲಿನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಯೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದು, ಅನಿಜ್ ಅವರ ಪಾರ್ಥೀವ ಶರೀರವನ್ನು ಶೀಘ್ರವಾಗಿ ತಾಯ್ನಾಡಾದ ಮಂಗಳೂರಿಗೆ ತರಲು ಅಗತ್ಯವಿರುವ ಎಲ್ಲಾ ಅಂತರರಾಷ್ಟ್ರೀಯ ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ.




    International
    Previous Articleಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಅವಾಂತರ; ಮರ ಬಿದ್ದು ಕಾರು ನಜ್ಜುಗುಜ್ಜು, ಟ್ರಾಫಿಕ್ ಜಾಮ್
    Next Article ಮೆಟಾಗೆ ಕೇಂದ್ರ ಸರ್ಕಾರದ ಬಿಗಿ ಎಚ್ಚರಿಕೆ; ಇನ್‌ಸ್ಟಾಗ್ರಾಂನ ಅಕ್ರಮ ಕಂಟೆಂಟ್ ತೆರವುಗೊಳಿಸಲು ಸೂಚನೆ

    Related Posts

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್‌ಗಿರಿ ಆರೋಪ; ಕಾಂಗ್ರೆಸ್‌ ಮುಖಂಡ ಸೇರಿ ಮೂವರ ವಿರುದ್ಧ FIR

    September 3, 2026

    ಫಾತಿಮಾ ನಿಶಾನ ಹತ್ಯೆ ಪ್ರಕರಣ: ಅತ್ತೆ–ನಾದಿನಿಗೆ ಕೋರ್ಟ್‌ನಿಂದ ಜಾಮೀನು

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.