Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ 8 ಬಾಂಗ್ಲಾದೇಶಿಗರ ಬಂಧನ: ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ನೆಲೆ, ಅಕ್ರಮ ಆಧಾರ್ ಪತ್ತೆ
    ಅಪರಾಧ

    ಮಂಗಳೂರಿನಲ್ಲಿ 8 ಬಾಂಗ್ಲಾದೇಶಿಗರ ಬಂಧನ: ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ನೆಲೆ, ಅಕ್ರಮ ಆಧಾರ್ ಪತ್ತೆ

    adminBy adminJuly 10, 2026No Comments1 Min Read

    ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ, ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗೆ ಕೇಂದ್ರ ಸರ್ಕಾರ ಕ್ರಮಗಳನ್ನು ಬಿಗಿಗೊಳಿಸಿದೆ. ಇದರ ಭಾಗವಾಗಿ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಬಾಂಗ್ಲಾದೇಶ ಮೂಲದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸುರತ್ಕಲ್ ಸಮೀಪದ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರ ದಾಖಲೆಗಳನ್ನು ಪರಿಶೀಲಿಸಿದ ವೇಳೆ, ಅವರು ಬಾಂಗ್ಲಾದೇಶ ಮೂಲದವರಾಗಿರುವುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ, ಸ್ಥಳೀಯ ಏಜೆಂಟರ ನೆರವಿನಿಂದ ಅಕ್ರಮವಾಗಿ ಆಧಾರ್ ಕಾರ್ಡ್ ಪಡೆದು ಇಲ್ಲಿ ನೆಲೆಸಿರುವುದು ಪತ್ತೆಯಾಗಿದೆ.

    ಬಂಧಿತರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ ಹಾಗೂ ಮತ್ತೋರ್ವ ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಾಂಗ್ಲಾದೇಶದ ರಾಜಶಾಹಿ ಪ್ರದೇಶದ ನಿವಾಸಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಇವರು ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದ ಗಡಿ ದಾಟಿ ಪಶ್ಚಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಿ, ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ರವಾನಿಸಲಾಗಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗಡೀಪಾರು ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

    #crime #dakshinakannada #national
    Previous Articleಅಕ್ರಮ ಕೆಂಪುಕಲ್ಲು ಸಾಗಾಟ ಪತ್ತೆ; ಲಾರಿ ಬಿಟ್ಟು ಕೀ ಹಾಗೂ ದಾಖಲೆಗಳೊಂದಿಗೆ ಚಾಲಕ ಪರಾರಿ
    Next Article 2017ರ ದರೋಡೆ ಪ್ರಕರಣದ ಆರೋಪಿ ಬಂಧನ; 41 ವಾರಂಟ್ ಬಳಿಕ ಪುತ್ತೂರು ಪೊಲೀಸರ ಬಲೆಗೆ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.