Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಳೆಯ ಕೊರತೆಯಿಂದ ನೇತ್ರಾವತಿ ನದಿಯಲ್ಲಿ ಕಡಿಮೆ ನೀರಿನ ಹರಿವು
    ಕರಾವಳಿ ಸುದ್ದಿ

    ಮಳೆಯ ಕೊರತೆಯಿಂದ ನೇತ್ರಾವತಿ ನದಿಯಲ್ಲಿ ಕಡಿಮೆ ನೀರಿನ ಹರಿವು

    adminBy adminJuly 11, 2026No Comments2 Mins Read

    ಬಂಟ್ವಾಳ: ಕಳೆದ ವರ್ಷ ಇದೇ ಅವಧಿಯಲ್ಲಿ ಅಪಾಯದ ಮಟ್ಟದ ಸಮೀಪ ಹರಿದು ಆತಂಕ ಸೃಷ್ಟಿಸಿದ್ದ ನೇತ್ರಾವತಿ ನದಿ, ಈ ಬಾರಿ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಕೊಂಡಿಲ್ಲ. ಮಳೆಗಾಲ ಆರಂಭವಾಗಿ ಹಲವು ದಿನಗಳಾದರೂ ನದಿಯಲ್ಲಿ ನೀರಿನ ಹರಿವು ಕಡಿಮೆಯೇ ಇರುವುದರಿಂದ ನೀರಿನ ಮಟ್ಟ ಗಮನಾರ್ಹವಾಗಿ ಏರಿಕೆಯಾಗಿಲ್ಲ.

    ಬಿ.ಸಿ.ರೋಡ್ ಸಮೀಪದ ಕಂಚಿಕಾರಪೇಟೆಯಲ್ಲಿ ಕಂದಾಯ ಇಲಾಖೆ ಅಳವಡಿಸಿರುವ ಮೀಟರ್ ಗೇಜ್‌ನಲ್ಲಿ ದಾಖಲಾಗುತ್ತಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಸುಮಾರು5.9 ಮೀಟರ್ ತಲುಪಿತ್ತು. ಆದರೆ ಈ ಬಾರಿ ಇದುವರೆಗೆ 4 ಮೀಟರ್ ಗಡಿಯನ್ನೂ ದಾಟಿಲ್ಲ ಎಂದು ತಿಳಿದುಬಂದಿದೆ.

    ನೇತ್ರಾವತಿ ನದಿಯ ನೀರಿನ ಮಟ್ಟವನ್ನು ಅಳೆಯಲು ಅಳವಡಿಸಿರುವ ಮೀಟರ್ ಗೇಜ್‌ನ ಅಳತೆ ಸ್ತಂಭಗಳ ಪೈಕಿ ಒಂದು ಸ್ತಂಭ ವಾಲಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗಿ ನದಿಯ ನೀರಿನ ಮಟ್ಟ ಹೆಚ್ಚಾದರೆ, ನಿಖರ ಅಳತೆ ಪಡೆಯಲು ಇದು ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.

    ಮಂಗಳೂರಿಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಸದ್ಯ ನೀರು ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಡ್ಯಾಂನ ಒಟ್ಟು 30 ಗೇಟ್‌ಗಳ ಪೈಕಿ 20 ಗೇಟ್‌ಗಳನ್ನು ಮುಚ್ಚಿ ನೀರನ್ನು ಸಂಗ್ರಹಿಸಲಾಗುತ್ತಿದೆ. ಸಾಮಾನ್ಯವಾಗಿ ಈ ವೇಳೆಗೆ ನಿರಂತರ ಮಳೆಯ ಪರಿಣಾಮ ಡ್ಯಾಂನ ಗೇಟ್‌ಗಳನ್ನು ತೆರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಆದರೆ ಈ ಬಾರಿ ಮಳೆಯ ಕೊರತೆಯಿಂದ ಅಂಥ ಪರಿಸ್ಥಿತಿ ಇನ್ನೂ ಎದುರಾಗಿಲ್ಲ.

    ಬಂಟ್ವಾಳ ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿದ್ದರೂ, ಮಳೆಯ ಪ್ರಮಾಣ ನಿರೀಕ್ಷಿತ ಮಟ್ಟ ತಲುಪಿಲ್ಲ. ಅಲ್ಪಾವಧಿಯ ಮಳೆ ಮತ್ತು ಬಲವಾದ ಗಾಳಿಯಿಂದ ಮರಗಳು ಉರುಳುವುದು, ಮನೆಗಳಿಗೆ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗುವ ಘಟನೆಗಳು ವರದಿಯಾಗುತ್ತಿವೆ. ಆದರೆ ನಿರಂತರ ಮಳೆಯ ಕೊರತೆಯಿಂದ ನೇತ್ರಾವತಿ ನದಿಯಲ್ಲಿ ಗಮನಾರ್ಹ ನೀರಿನ ಹರಿವು ಕಂಡುಬಂದಿಲ್ಲ. ಸದ್ಯ ಸಣ್ಣ ಪ್ರಮಾಣದಲ್ಲಿ ಮಾತ್ರ ನೀರಿನ ಹರಿವು ಹೆಚ್ಚಳವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ.




    #dakshinakannada
    Previous Articleಪೋಕ್ಸೋ ಪ್ರಕರಣದ ದ್ವೇಷಕ್ಕೆ ಆರು ಮಂದಿಯ ಭೀಕರ ಹತ್ಯೆ
    Next Article ಮಂಗಳೂರು: ಕರ್ನಾಟಕದ ಮುಂದಿನ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಕರಾವಳಿ ನಗರ

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.