Close Menu
    What's Hot

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತುಟಿಗೆ ಹೊಲಿಗೆಗೂ ಮುನ್ನ ನೀಡಿದ ಅರಿವಳಿಕೆ ಬಳಿಕ ಹಸುಗೂಸು ಮೃತ್ಯು:ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್
    ಅಪರಾಧ

    ತುಟಿಗೆ ಹೊಲಿಗೆಗೂ ಮುನ್ನ ನೀಡಿದ ಅರಿವಳಿಕೆ ಬಳಿಕ ಹಸುಗೂಸು ಮೃತ್ಯು:ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್

    adminBy adminJuly 12, 2026No Comments2 Mins Read

    ಕಣ್ಣೂರು : ತುಟಿಗೆ ಬಿದ್ದ ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 18 ತಿಂಗಳ ಹಸುಗೂಸೊಂದು ಪ್ರಜ್ಞೆ ಕಳೆದುಕೊಂಡು, ಐದು ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿ ಶುಕ್ರವಾರ (ಜುಲೈ 10) ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಮದುವೆಯಾದ ಎಂಟು ವರ್ಷಗಳ ನಂತರ ಜನಿಸಿದ್ದ ದಂಪತಿಯ ಏಕೈಕ ಆಶಾಕಿರಣವಾಗಿದ್ದ ಮಗು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

    ಎರಾಮಮ್-ಕುತ್ತೂರು ಗ್ರಾಮ ಪಂಚಾಯತ್‌ನ ಮಠಮಂಗಲಂ ನಿವಾಸಿಗಳಾದ ಟಿ. ಸೂರಜ್ ಮತ್ತು ವಿಜಿಷಾ ದಂಪತಿಯ ಏಕೈಕ ಪುತ್ರ ದೇವಾಂಶ್ ಶೌರಿಯಾ ಮೃತಪಟ್ಟ ದುರ್ದೈವಿ ಬಾಲಕ. ಮಗುವಿನ ಸಂಬಂಧಿ ಕೆ. ರಾಜೀವನ್ ನೀಡಿದ ದೂರಿನ ಮೇರೆಗೆ ಪಯ್ಯನ್ನೂರಿನ ಬೇಬಿ ಮೆಮೋರಿಯಲ್ ಆಸ್ಪತ್ರೆಯ ಅರಿವಳಿಕೆ ತಜ್ಞೆ  ಡಾ. ಅಂಜಲಿ ಪೊದುವಾಲ್ ವಿರುದ್ಧ ಪಯ್ಯನ್ನೂರು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

    ಘಟನೆಯ ವಿವರಗಳ ಪ್ರಕಾರ, ಜುಲೈ 5 ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಮಗು ದೇವಾಂಶ್ ಆಕಸ್ಮಿಕವಾಗಿ ಬಿದ್ದು ಆತನ ತುಟಿಗೆ ಗಾಯವಾಗಿತ್ತು. ತಕ್ಷಣ ಪೋಷಕರು ಮಗುವನ್ನು ಪಯ್ಯನ್ನೂರಿನ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರು ಗಾಯಕ್ಕೆ ಹೊಲಿಗೆ ಹಾಕುವ ಮುನ್ನ ಮಗುವಿಗೆ ಅರಿವಳಿಕೆ ನೀಡಿದ್ದರು. ಆದರೆ, ಅರಿವಳಿಕೆ ನೀಡಿದ ತಕ್ಷಣ ಮಗು ಪ್ರಜ್ಞೆ ಕಳೆದುಕೊಂಡಿದ್ದು, ಆ ಬಳಿಕ ಎಂದಿಗೂ ಪ್ರಜ್ಞೆ ಮರಳಿ ಪಡೆಯಲೇ ಇಲ್ಲ. ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ ಆಸ್ಪತ್ರೆಯು ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರು ಘಟಕಕ್ಕೆ ರವಾನಿಸಿತ್ತಾದರೂ, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

    ವೈದ್ಯರು ಮಗುವಿನ ತೂಕವನ್ನು ಗಮನಿಸದೆ ಹೆಚ್ಚಿನ ಪ್ರಮಾಣದ ಅರಿವಳಿಕೆ ಡೋಸೇಜ್ ನೀಡಿದ್ದರಿಂದಲೇ ಮಗುವಿನ ಮೆದುಳಿಗೆ ತೀವ್ರ ಹಾನಿಯಾಗಿ (Brain Damage) ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಡಾ. ಅಂಜಲಿ ಪೊದುವಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಖಂಡಿಸಿ ಡಿವೈಎಫ್‌ಐ, ಯುವ ಕಾಂಗ್ರೆಸ್ ಮತ್ತು ಎಐವೈಎಫ್ ಕಾರ್ಯಕರ್ತರು ಪಯ್ಯನ್ನೂರು ಆಸ್ಪತ್ರೆಗೆ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿದ್ದಾರೆ.

    ಆದರೆ, ಆಸ್ಪತ್ರೆ ಮಂಡಳಿಯು ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳನ್ನು ಕಂಪ್ಲೀಟ್ ಆಗಿ ನಿರಾಕರಿಸಿದೆ. “ಅರಿವಳಿಕೆ ನೀಡಿದ ತಕ್ಷಣ ಮಗುವಿಗೆ ಅನಿರೀಕ್ಷಿತವಾಗಿ ಹೃದಯ ಸ್ತಂಭನ ಸಂಭವಿಸಿದೆ. ತಕ್ಷಣವೇ ವೆಂಟಿಲೇಟರ್ ಬೆಂಬಲ ನೀಡಿ ಕಣ್ಣೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಎಲ್ಲಾ ಅಧಿಕೃತ ವೈದ್ಯಕೀಯ ಪ್ರೋಟೋಕಾಲ್‌ಗಳನ್ನು ಪಾಲಿಸಲಾಗಿದೆ. ಸೂಕ್ತ ಡೋಸೇಜ್ ನೀಡಿದಾಗಲೂ ವೈದ್ಯಕೀಯ ಲೋಕದಲ್ಲಿ ಇಂತಹ ಅಪರೂಪದ ಅಡ್ಡಪರಿಣಾಮಗಳು ಉಂಟಾಗಬಹುದು” ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ಸಮರ್ಥಿಸಿಕೊಂಡಿದೆ. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

    #nation
    Previous Articleಶಾಲೆಗೆ ಗೈರುಹಾಜರಾದ ಬಾಲಕಿ ಹೇಳಿಕೆಯಿಂದ ಪೋಕ್ಸೊ ಪ್ರಕರಣ ಬೆಳಕಿಗೆ
    Next Article ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಎನ್‌ಐಎ ಬಲೆಗೆ

    Related Posts

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.