Close Menu
    What's Hot

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಎನ್‌ಐಎ ಬಲೆಗೆ
    ಅಪರಾಧ

    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಎನ್‌ಐಎ ಬಲೆಗೆ

    adminBy adminJuly 13, 2026No Comments1 Min Read

    ಮಂಗಳೂರು: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ನೌಶಾದ್‌ (32) ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ಧುಲ್‌ ನಾಸಿರ್‌ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರನ್ನು ಕೇರಳ ಮತ್ತು ತಮಿಳುನಾಡಿನ ರಹಸ್ಯ ಅಡಗುದಾಣಗಳಲ್ಲಿ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿವೆ ಎಂದು ಮೂಲಗಳು ವರದಿ ಮಾಡಿವೆ.
    2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿತ್ತು. ಪ್ರಸ್ತುತ ಬಂಧಿತನಾಗಿರುವ ನೌಶಾದ್, ಪ್ರವೀಣ್ ಹತ್ಯೆಗೈದ ಬಳಿಕ ಹಂತಕರು ಪೊಲೀಸರಿಂದ ತಪ್ಪಿಸಿಕೊಂಡು ಸುರಕ್ಷಿತವಾಗಿ ಓಡಿಹೋಗಲು ವಾಹನ ಚಾಲಕನಾಗಿ (Driver) ಪ್ರಮುಖವಾಗಿ ಸಹಾಯ ಮಾಡಿದ್ದ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

    ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈಗಾಗಲೇ ಒಟ್ಟು 28 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Charge Sheet) ಸಲ್ಲಿಸಿದ್ದಾರೆ. ಇವರಿಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಜೈಲು ಸೇರಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನು ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಹಿಂದೆ ಎನ್‌ಐಎ ಈ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಭಾರಿ ನಗದು ಬಹುಮಾನ ನೀಡುವುದಾಗಿ ಘೋಷಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಸದ್ಯ ಕೇರಳ ಮತ್ತು ತಮಿಳುನಾಡಿನಲ್ಲಿ ಸಿಕ್ಕಿಬಿದ್ದಿರುವ ನೌಶಾದ್ ಹಾಗೂ ಅಬ್ದುಲ್ ನಾಸಿರ್‌ನನ್ನು ಹೆಚ್ಚಿನ ವಿಚಾರಣೆ ಮತ್ತು ಕಾನೂನು ಪ್ರಕ್ರಿಯೆಗಾಗಿ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆದೊಯ್ದಿದ್ದಾರೆ




    #crime #dakshinakannada
    Previous Articleತುಟಿಗೆ ಹೊಲಿಗೆಗೂ ಮುನ್ನ ನೀಡಿದ ಅರಿವಳಿಕೆ ಬಳಿಕ ಹಸುಗೂಸು ಮೃತ್ಯು:ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್
    Next Article ತಮಿಳುನಾಡಿನಲ್ಲಿ ಕುಟುಂಬ ದುರಂತ: ಇಬ್ಬರು ಮಕ್ಕಳ ಹತ್ಯೆ ಬಳಿಕ ತಂದೆಯ ಆತ್ಮಹತ್ಯೆ

    Related Posts

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.