Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ
    ಕರ್ನಾಟಕ

    ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವಶ

    adminBy adminJuly 14, 2026No Comments2 Mins Read

    ಬೆಂಗಳೂರು:ರಾಜ್ಯ ಬಿಜೆಪಿಯ ಹಿರಿಯ ಧುರೀಣ, ಮಾಜಿ ಸಚಿವ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

    ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾತ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಕ್ಕಾ ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು.

    ಬಿಜೆಪಿಯ ಮುಂಚಿನ ರೂಪವಾಗಿದ್ದ ‘ಭಾರತೀಯ ಜನಸಂಘ’ದ ವತಿಯಿಂದ ಅಂದಿನ ಬೆಂಗಳೂರು ನಗರ ನಿಗಮಕ್ಕೆ (ಬಿಸಿಸಿ – ಈಗಿನ ಜಿಬಿಎ ) ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ರಾಮಚಂದ್ರೇಗೌಡರದ್ದಾಗಿತ್ತು. ಆ ಮೂಲಕ ಬೆಂಗಳೂರಿನಲ್ಲಿ ಪಕ್ಷದ ಗಟ್ಟಿಯಾದ ಬೇರುಗಳನ್ನು ಬಿಡಲು ಅವರು ಕಾರಣರಾಗಿದ್ದರು. ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಇವರು, ಸತತವಾಗಿ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು.

    2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಇವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆದರೆ ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿ ದೋಷಮುಕ್ತಗೊಳಿಸಿತ್ತು. ಸುಮಾರು ಐದು ದಶಕಗಳ ಕಾಲ ಸಕ್ರಿಯ ರಾಜಕೀಯದಲ್ಲಿದ್ದ ರಾಮಚಂದ್ರೇಗೌಡರು 2018 ರಲ್ಲಿ ವಯೋಸಹಜ ಕಾರಣಗಳಿಂದಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದರು. ಇವರ ನಿಧನದೊಂದಿಗೆ ಕರ್ನಾಟಕ ಬಿಜೆಪಿಯ ಆರಂಭಿಕ ದಿನಗಳ ಒಂದು ಮಹತ್ವದ ಅಧ್ಯಾಯ ಕೊನೆಗೊಂಡಂತಾಗಿದೆ.




    #karnataka
    Previous Articleಮಂಗಳೂರಲ್ಲಿ ಮತ್ತೆ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ವಶ; ಕಟ್ಟಡ ನಿರ್ಮಾಣ ಸ್ಥಳದಲ್ಲಿ ಪೊಲೀಸರ ಕಾರ್ಯಾಚರಣೆ
    Next Article ಬೆಳ್ತಂಗಡಿಯಲ್ಲಿ ಮುಸ್ತಾಕ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು

    Related Posts

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.