Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಆದಿಚುಂಚನಗಿರಿ ಮಠದ ಜಮೀನು ಕಬಳಿಕೆ ಜಾಲ ಬಯಲು; 11 ಮಂದಿ ಅರೆಸ್ಟ್
    ಅಪರಾಧ

    ಆದಿಚುಂಚನಗಿರಿ ಮಠದ ಜಮೀನು ಕಬಳಿಕೆ ಜಾಲ ಬಯಲು; 11 ಮಂದಿ ಅರೆಸ್ಟ್

    adminBy adminJuly 14, 2026No Comments2 Mins Read

    ಬೆಂಗಳೂರು: ನಗರದ ಆದಿಚುಂಚನಗಿರಿ ಮಠಕ್ಕೆ  ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ  ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್

    ಸುಮಾರು 30 ವರ್ಷಗಳ ಹಿಂದೆ ಭಕ್ತರು ಆದಿಚುಂಚನಗಿರಿ ಮಠಕ್ಕೆ ಕೆಂಗೇರಿ ಹೋಬಳಿಯ ಕಂಬಳಿಪುರ ಗ್ರಾಮದ ಸರ್ವೇ ನಂಬರ್ 43 ರಲ್ಲಿ ಒಟ್ಟು 45 ಎಕರೆ ಜಮೀನನ್ನು ಕಾಣಿಕೆಯಾಗಿ ನೀಡಿದ್ದರು. ಈ ಪೈಕಿ 6 ಎಕರೆ ಬೆಲೆಬಾಳುವ ಜಮೀನನ್ನು ಕಬಳಿಸಲು ನೆಲಮಂಗಲ ಮೂಲದ ಮಾಸ್ಟರ್ ಮೈಂಡ್ ನರೇಶ್ ಗೌಡ ಮತ್ತು ಬ್ರೋಕರ್ ಆರೋಗ್ಯಸ್ವಾಮಿ ಸ್ಕೆಚ್ ಹಾಕಿದ್ದ.

    ಸತ್ತವರ ಸಮಾಧಿ ಹುಡುಕಿ ನಕಲಿ ವಂಶವೃಕ್ಷ ಸೃಷ್ಟಿ

    ಆರೋಪಿಗಳು ವಂಚನೆಗೆ ಬಳಸಿದ ದಾರಿ ಯಾವುದೇ ಸಿನಿಮಾಕ್ಕೂ ಕಡಿಮೆ ಇಲ್ಲ.ಮಠದ ಜಮೀನಿನ ಮೂಲ ಮಾಲೀಕರ ಹೆಸರೇ ಇರುವ ಸತ್ತ ವ್ಯಕ್ತಿಯೊಬ್ಬ ಇವರಿಗೆ ಬೇಕಾಗಿತ್ತು. ಇದಕ್ಕಾಗಿ ಸ್ಮಶಾನಗಳಿಗೆ ಅಲೆದಾಡಿದ ಖದೀಮರು, ಕೊನೆಗೆ ಮೂಲ ಮಾಲೀಕನ ಹೆಸರೇ ಇದ್ದ ವ್ಯಕ್ತಿಯ ಸಮಾಧಿಯೊಂದನ್ನು ಪತ್ತೆ ಮಾಡಿದ್ದರು. ಆ ಸಮಾಧಿಯ ಮೇಲಿದ್ದ ಹೆಸರಿನ ಆಧಾರದ ಮೇಲೆ ಅವರ ಕುಟುಂಬವನ್ನು ಸಂಪರ್ಕಿಸಿದ್ದರು.

    ಅಲ್ಲೇ ಇವರಿಗೆ ಬೇಗೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಫ್ರಾನ್ಸಿಸ್ ಸಿಕ್ಕಿದ್ದ. ಫ್ರಾನ್ಸಿಸ್ ತಂದೆಯ ಹೆಸರು ಹಾಗೂ ಮಠದ ಜಮೀನಿನ ಮೂಲ ಮಾಲೀಕನ ಹೆಸರು, ವಯಸ್ಸು ಮ್ಯಾಚ್ ಆಗಿದ್ದನ್ನೇ ಬಂಡವಾಳ ಮಾಡಿಕೊಂಡ ನರೇಶ್ ಗೌಡನ ಟೀಮ್, ಫ್ರಾನ್ಸಿಸ್ ಹಾಗೂ ಜೋಸ್ವಾನ್ ಇಬ್ಬರೂ ಅಣ್ಣ-ತಂಗಿ ಎಂದು ಸುಳ್ಳು ವಂಶವೃಕ್ಷ ಸೃಷ್ಟಿಸಿದ್ದರು.

    ಲಂಚ ಪಡೆದು ಸಾಥ್ ನೀಡಿದ ಸರ್ಕಾರಿ ಅಧಿಕಾರಿಗಳು

    ಈ ನಕಲಿ ದಾಖಲೆಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆದು ಬೇಗೂರು ವಿಲೇಜ್ ಅಕೌಂಟೆಂಟ್ ಶಿವಪ್ರಸಾದ್, ರೆವಿನ್ಯೂ ಇನ್ಸ್ಪೆಕ್ಟರ್ ಕಿರಣ್ ಮತ್ತು ಡೆಪ್ಯೂಟಿ ತಹಶೀಲ್ದಾರ್ ದೀಪಕ್ ನಕಲಿ ದಾಖಲೆ ಪತ್ರ ಮಾಡಿಕೊಟ್ಟಿದ್ದರು. ಇದನ್ನು ಪಡೆದ ಕೆಂಗೇರಿಯ ವಿಲೇಜ್ ಅಕೌಂಟೆಂಟ್ ಸತೀಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಡೆಪ್ಯೂಟಿ ತಹಶೀಲ್ದಾರ್, ಅದು ನಕಲಿ ಎಂದು ಗೊತ್ತಿದ್ದರೂ ಖಾತೆ ಮಾಡಿಕೊಟ್ಟಿದ್ದರು. ಆಸ್ತಿ ಕೈ ಸೇರಿದ ತಕ್ಷಣ ಆರೋಪಿಗಳು ಅದನ್ನು ಬೇರೆಯವರಿಗೆ ಮಾರಾಟ ಮಾಡಿ ಹಣ ಮಾಡಿಕೊಂಡಿದ್ದರು.

    ಮಠದಿಂದ ದೂರು: ಬಯಲಾಯ್ತು ವಂಚನೆ

    ಕೊನೆಗೆ ಜಮೀನು ಹಸ್ತಾಂತರವಾಗಿರುವ ವಿಚಾರ ತಿಳಿದು ಆದಿಚುಂಚನಗಿರಿ ಮಠದ ವತಿಯಿಂದ ಕೆಂಗೇರಿ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಈ ವಂಚನೆ ಬಯಲಾಗಿದೆ. ಸದ್ಯ 6 ಅಧಿಕಾರಿಗಳು ಸೇರಿದಂತೆ 11 ಜನರನ್ನು ಜೈಲಿಗಟ್ಟಲಾಗಿದ್ದು, ತಲೆಮರೆಸಿಕೊಂಡಿರುವ ಮಾಸ್ಟರ್ ಮೈಂಡ್ ನರೇಶ್ ಗೌಡನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.




    #crime #karnataka
    Previous Articleಬೆಂಗಳೂರಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ; ಡಿಕೆ ಶಿವಕುಮಾರ್ ಘೋಷಣೆ
    Next Article ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪ; ಪಿಎಸ್ಐ ಜೈಲುಪಾಲು

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.