Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಇರಾನ್ ಮೇಲೆ ಅಮೆರಿಕದ ಭೀಕರ ವೈಮಾನಿಕ ದಾಳಿ; ತೈಲ ಟ್ಯಾಂಕರ್ ಮೇಲೂ ಕ್ಷಿಪಣಿ ದಾಳಿ
    ಅಂತರಾಷ್ಟ್ರೀಯ

    ಇರಾನ್ ಮೇಲೆ ಅಮೆರಿಕದ ಭೀಕರ ವೈಮಾನಿಕ ದಾಳಿ; ತೈಲ ಟ್ಯಾಂಕರ್ ಮೇಲೂ ಕ್ಷಿಪಣಿ ದಾಳಿ

    adminBy adminJuly 16, 2026No Comments2 Mins Read

    ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಜಾಗತಿಕ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಅಮೆರಿಕದ ಮಿಲಿಟರಿ ಪಡೆಗಳು ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿದಂತೆ ಇರಾನ್ ನ ಉತ್ತರ ಭಾಗದ ಪ್ರಮುಖ ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಇದರ ಬೆನ್ನಲ್ಲೇ ಅಮೆರಿಕದ ನೌಕಾ ದಿಗ್ಬಂಧನವನ್ನು  ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ಚಲಿಸಲಾಗದಂತೆ ನಿಷ್ಕ್ರಿಯಗೊಳಿಸಿವೆ.

    ಇರಾನ್ ವಿರುದ್ಧದ ಯುದ್ಧವನ್ನು ಅಂತ್ಯಗೊಳಿಸಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದ ಈಗಾಗಲೇ ಸಂಪೂರ್ಣವಾಗಿ ವಿಫಲವಾಗಿದ್ದು, ಎರಡೂ ರಾಷ್ಟ್ರಗಳು ಮತ್ತೆ ತೀವ್ರ ದಾಳಿ-ಪ್ರತಿದಾಳಿಯಲ್ಲಿ ತೊಡಗಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಉತ್ಪಾದನೆ ಮತ್ತು ಬಾಹ್ಯಾಕಾಶ ಕಾರ್ಯಕ್ರಮದ ಪ್ರಮುಖ ಕೇಂದ್ರವಾಗಿರುವ ‘ಸೆಮ್ನಾನ್’ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಭಾರಿ ಬಾಂಬ್ ದಾಳಿ ನಡೆಸಿವೆ. ಬಂದರ್ ಅಬ್ಬಾಸ್ ಮತ್ತು ಖೇಶ್ಮ್ ದ್ವೀಪಗಳಲ್ಲಿರುವ ಇರಾನ್‌ನ ಡ್ರೋನ್ ಉಡಾವಣಾ ಕೇಂದ್ರಗಳು ಮತ್ತು ರೇಡಾರ್ ವ್ಯವಸ್ಥೆಗಳನ್ನು ಅಮೆರಿಕ ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಇದಲ್ಲದೆ, ಹೋರ್ಮುಜ್ ಜಲಸಂಧಿಯಲ್ಲಿರುವ ಅತ್ಯಂತ ಕಾರ್ಯತಂತ್ರದ ಮಹತ್ವದ ಗ್ರೇಟರ್ ಟುನ್ಬ್ ದ್ವೀಪದಲ್ಲಿನ ಇರಾನ್‌ನ ರಕ್ಷಣಾ ಹಾಗೂ ಕ್ಷಿಪಣಿ ನೆಲೆಗಳ ಮೇಲೂ ಅಮೆರಿಕ ಯುದ್ಧವಿಮಾನಗಳು ದಾಳಿ ನಡೆಸಿವೆ.

    ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದತ್ತ ಸಾಗುತ್ತಿದ್ದ ‘ಬೆಲ್ಮಾ’ ಎಂಬ ಕುರಕಾವೊ ಧ್ವಜ ಹೊಂದಿದ್ದ ತೈಲ ಸಾಗಣೆ ಹಡಗು ಅಮೆರಿಕದ ಎಚ್ಚರಿಕೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಲಾಗಿದೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಹಡಗು ತನ್ನ ಮಾರ್ಗ ಬದಲಿಸದ ಹಿನ್ನೆಲೆಯಲ್ಲಿ, ಅಮೆರಿಕದ ಯುದ್ಧ ವಿಮಾನದಿಂದ ಹಡಗಿನ ಹೊಗೆ ಕೊಳವೆಗೆ  ನೇರವಾಗಿ ಕ್ಷಿಪಣಿ ಹೊಡೆದು ಅದನ್ನು ಸಮುದ್ರದ ಮಧ್ಯದಲ್ಲೇ ನಿಷ್ಕ್ರಿಯಗೊಳಿಸಲಾಗಿದೆ.

    ಸಿಸ್ತಾನ್-ಬಲುಚಿಸ್ತಾನ್ ಪ್ರಾಂತ್ಯದಲ್ಲಿರುವ ಇರಾನ್‌ನ 388ನೇ ಮೆಕನೈಸ್ಡ್ ಇನ್ಫ್ಯಾಂಟ್ರಿ ಬ್ರಿಗೇಡ್ ನೆಲೆ ಮೇಲೆ ಅಮೆರಿಕ ಕನಿಷ್ಠ 13 ಕ್ಷಿಪಣಿಗಳನ್ನು ಬಳಸಿ ದಾಳಿ ನಡೆಸಿದೆ. ಈ ಭೀಕರ ದಾಳಿಯಲ್ಲಿ ಇರಾನ್‌ನ ಕನಿಷ್ಠ ಏಳು ಸೈನಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ಈ ರಣಾಕ್ರಮಣಕ್ಕೆ ಪ್ರತಿಯಾಗಿ ಇರಾನ್ ಮುಂಜಾನೆ ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಹಾಗೂ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಂಡು ಭಾರಿ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿದೆ. ಇದರೊಂದಿಗೆ ಮಧ್ಯಪ್ರಾಚ್ಯದಲ್ಲಿ ಸಂಪೂರ್ಣ ಯುದ್ಧದ ಭೀತಿ ಎದುರಾಗಿದೆ.




    International
    Previous Articleಕೌಟುಂಬಿಕ ಕಲಹದ ರಕ್ತಸಿಕ್ತ ಅಂತ್ಯ; ವೈದ್ಯ ಪತಿ ಹತ್ಯೆ, ಮಗನಿಗೂ ಚಾಕು ಇರಿತ
    Next Article ಇಸ್ರೋದಿಂದ ವಿಜ್ಞಾನಿಗಳ ನಿರ್ಗಮನ ಹೆಚ್ಚಳ; ರಾಜೀನಾಮೆ ಪ್ರಕ್ರಿಯೆ ಬಿಗಿಗೊಳಿಸಿದ ಕೇಂದ್ರ

    Related Posts

    ಓಣಂ ಆಚರಿಸಲು ತಾಯಿಯ ಬಳಿಗೆ ಹೋಗಿದ್ದ ಬಾಲಕನ ದಾರುಣ ಅಂತ್ಯ

    September 1, 2026

    ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    August 31, 2026

    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್; ಒಡೆದು ₹57 ಲಕ್ಷ ದೋಚಿದ 29 ಮಂದಿ ಅರೆಸ್ಟ್

    August 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.