Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕರಾವಳಿಗೆ ಬರಲಿದ್ದ ಕೋಟ್ಯಂತರ ಮೌಲ್ಯದ ಡ್ರಗ್ಸ್ ವಶ; ಬೆಳ್ತಂಗಡಿ ಮೂಲದ ಇಬ್ಬರು ಬಂಧನ
    ಅಪರಾಧ

    ಕರಾವಳಿಗೆ ಬರಲಿದ್ದ ಕೋಟ್ಯಂತರ ಮೌಲ್ಯದ ಡ್ರಗ್ಸ್ ವಶ; ಬೆಳ್ತಂಗಡಿ ಮೂಲದ ಇಬ್ಬರು ಬಂಧನ

    adminBy adminJuly 16, 2026No Comments2 Mins Read

    ಮಂಗಳೂರು : ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನಕ್ಕೆ ಕರಾವಳಿ ಪೊಲೀಸರು ಭಾರಿ ಯಶಸ್ಸು ತಂದಿದ್ದಾರೆ. ನೆರೆಯ ಕೇರಳ ರಾಜ್ಯ, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮಂಗಳೂರಿಗೆ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ಮಾದಕ ದ್ರವ್ಯ ಪೂರೈಕೆಗೆ ಸಿದ್ಧತೆ ನಡೆಸಿದ್ದ ಅಂತರರಾಜ್ಯ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದ ಲಾಡ್ಜ್‌ ಒಂದರ ಮೇಲೆ ಮಿಂಚಿನ ದಾಳಿ ನಡೆಸಿ ಬರೋಬ್ಬರಿ 5.196 ಕೆಜಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಮುಹಮ್ಮದ್ ಅಲ್ಫಾಝ್ (28) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕಾನಂದ ನಗರದ ಮುಹಮ್ಮದ್ ಮುಸ್ತಫಾ (28) ಎಂದು ಗುರುತಿಸಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.20 ಕೋಟಿ ರೂಪಾಯಿಗಳಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಕಳೆದ 15 ದಿನಗಳ ಹಿಂದೆ ಮಂಗಳೂರಿನಲ್ಲಿ 15 ಗ್ರಾಂ ಎಂಡಿಎಂಎ ಸಮೇತ ಅಣ್ಣಪ್ಪಸ್ವಾಮಿ ಎಂಬ ಸಣ್ಣ ಡ್ರಗ್ ಪೆಡ್ಲರ್‌ನನ್ನು ಪೊಲೀಸರು ಬಂಧಿಸಿದ್ದರು. ಈತನ ಬ್ಯಾಕ್‌ವರ್ಡ್ ಲಿಂಕ್ ಬೆನ್ನಟ್ಟಿದ ಸಿಸಿಬಿ ಇನ್ಸ್‌ಪೆಕ್ಟರ್ ನೇತೃತ್ವದ ವಿಶೇಷ ತಂಡಕ್ಕೆ ದೇಶದ ರಾಜಧಾನಿ ದೆಹಲಿಯಿಂದ ಕರ್ನಾಟಕಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಾಟವಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಆರೋಪಿಗಳಾದ ಅಲ್ಫಾಝ್ ಮತ್ತು ಮುಸ್ತಫಾ ದೆಹಲಿಯಿಂದ ಡ್ರಗ್ಸ್ ಖರೀದಿಸಿಕೊಂಡು ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಸಾಗಿಸುತ್ತಿದ್ದರು.

    ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಲಾಡ್ಜ್’ನಲ್ಲಿ ತಂಗಿರುವ ಬಗ್ಗೆ ಪಕ್ಕಾ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪಡೆ, ಧೀಡೀರ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದೆ. ದಾಳಿಯ ವೇಳೆ 5.196 ಕೆಜಿ ಎಂಡಿಎಂಎ ಕ್ರಿಸ್ಟಲ್ಸ್, ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಅಲ್ಫಾಝ್ ಹಳೆ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲೂ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್ ಮಾರಾಟದ ಕೇಸ್‌ಗಳು ದಾಖಲಾಗಿದ್ದವು. ಈ ಅಂತರರಾಜ್ಯ ಜಾಲದಲ್ಲಿ ಕೇರಳ ಹಾಗೂ ಮುಂಬೈನ ದೊಡ್ಡ ಡ್ರಗ್ ಡೀಲರ್ ಗಳು ಭಾಗಿಯಾಗಿರುವ ಶಂಕೆ ಇದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.




    #crime #dakshinakannada
    Previous Articleಕಳ್ಳತನಕ್ಕೆ ನುಗ್ಗಿದ್ದ ವೇಳೆ ಮುಸ್ತಾಕ್ ಸಾವು; ಸಹಚರನ ಬಂಧನ
    Next Article ದಕ್ಷಿಣ ಕನ್ನಡದಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.