Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ದಸರಾ ಕಂಬಳಕ್ಕೆ ಭರ್ಜರಿ ಸಿದ್ಧತೆ; ಮರಗಳ ತೆರವು, ಕೆರೆ ಮುಚ್ಚುವಿಕೆ ವಿರುದ್ಧ ಆಕ್ರೋಶ
    ಅಪರಾಧ

    ದಸರಾ ಕಂಬಳಕ್ಕೆ ಭರ್ಜರಿ ಸಿದ್ಧತೆ; ಮರಗಳ ತೆರವು, ಕೆರೆ ಮುಚ್ಚುವಿಕೆ ವಿರುದ್ಧ ಆಕ್ರೋಶ

    adminBy adminJuly 16, 2026Updated:July 16, 2026No Comments2 Mins Read

    ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಪ್ರದರ್ಶನ ಆಯೋಜಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ, ಸಿದ್ಧತೆಗಳು ಮಾತ್ರ ವೇಗ ಪಡೆದುಕೊಂಡಿವೆ. ಮೈಸೂರಿನ ಹೊರವಲಯದ ಸಾತಗಳ್ಳಿ ಸಮೀಪದ ಸುಮಾರು 20 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಅಗತ್ಯ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಪರಿಸರ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

    ಕಂಬಳಕ್ಕಾಗಿ ಗುರುತಿಸಲಾದ ಪ್ರದೇಶವು ದಟ್ಟ ಹಸಿರಿನಿಂದ ಕೂಡಿದ್ದು, ವಿವಿಧ ಜಾತಿಯ 150ಕ್ಕೂ ಹೆಚ್ಚು ಬೃಹತ್ ಮರಗಳು ಇಲ್ಲಿ ಬೆಳೆದಿವೆ. ಕಂಬಳ ಕರೆಯನ್ನು ನಿರ್ಮಿಸಲು ಈ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದ್ದು, ಇದರಿಂದ ಪರಿಸರ ಹಾನಿಯಾಗಲಿದೆ ಎಂದು ಪರಿಸರ ಹೋರಾಟಗಾರರು ಆರೋಪಿಸಿದ್ದಾರೆ.

    ಇದೇ ಪ್ರದೇಶದಲ್ಲಿ ಸುಮಾರು ಆರು ಎಕರೆ ವಿಸ್ತೀರ್ಣ ಹೊಂದಿರುವ ದೊಡ್ಡ ಕೆರೆಯೂ ಇದ್ದು, ಮಳೆಗಾಲದಲ್ಲಿ ನೀರಿನಿಂದ ತುಂಬಿ ಅಪರೂಪದ ಪಕ್ಷಿಗಳ ಆಶ್ರಯ ತಾಣವಾಗಿರುವ ಈ ಕೆರೆಯ ಭಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದರೂ, ಹಲವು ಜೆಸಿಬಿ ಯಂತ್ರಗಳ ಮೂಲಕ ಕಾಮಗಾರಿ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.

    ಸರ್ಕಾರದ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆ ನಡೆಯುತ್ತಿದೆ. ತುಳುನಾಡಿನ ಸಂಸ್ಕೃತಿ ಮತ್ತು ಕಂಬಳದ ಮೂಲ ಸ್ವರೂಪವನ್ನು ಕಾಪಾಡಬೇಕು ಎಂದು ಒತ್ತಾಯಿಸುತ್ತಿರುವ ಹಲವರು, ಕಂಬಳವನ್ನು ಅದರ ನೈಸರ್ಗಿಕ ಪರಿಸರದಿಂದ ಬೇರ್ಪಡಿಸಿ ಬೇರೆಡೆ ನಡೆಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ಈ ಹಿಂದೆ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಕಂಬಳವನ್ನು ದಸರಾ ಕಾರ್ಯಕ್ರಮಕ್ಕೆ ಸೇರಿಸುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ತುಳುನಾಡಿನ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಕೇವಲ ಪ್ರದರ್ಶನ ಕಾರ್ಯಕ್ರಮವಾಗಿ ರೂಪಿಸುವುದು ಸಮಂಜಸವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದರು.

    ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕಂಬಳವು ತುಳುನಾಡಿನ ಭೌಗೋಳಿಕತೆ, ಸಂಸ್ಕೃತಿ ಮತ್ತು ದೈವಾರಾಧನೆಯೊಂದಿಗೆ ಬೆಸೆದುಕೊಂಡಿರುವ ವಿಶಿಷ್ಟ ಕ್ರೀಡೆಯಾಗಿದ್ದು, ಅದನ್ನು ಕೃತಕವಾಗಿ ಬೇರೆ ಪ್ರದೇಶಕ್ಕೆ ಸ್ಥಳಾಂತರಿಸುವುದು ಎರಡೂ ಭಾಗಗಳ ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇನ್ನೊಂದೆಡೆ, ರಾಜ್ಯದಲ್ಲಿ ಬರ ಪರಿಸ್ಥಿತಿ ಹಾಗೂ ಹಣಕಾಸಿನ ಒತ್ತಡ ಇರುವ ಸಂದರ್ಭದಲ್ಲಿ ಕೇವಲ ಎರಡು ದಿನಗಳ ಕಂಬಳ ಪ್ರದರ್ಶನಕ್ಕಾಗಿ ಸಾರ್ವಜನಿಕ ಹಣದ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವುದನ್ನು ರೈತ ಸಂಘಟನೆಗಳು ಪ್ರಶ್ನಿಸಿವೆ. ಈ ಯೋಜನೆಗೆ ಮೀಸಲಿಡಲಾಗುತ್ತಿರುವ 8 ರಿಂದ 10 ಕೋಟಿ ರೂಪಾಯಿ ಸಾರ್ವಜನಿಕ ಹಿತದೃಷ್ಟಿಯಿಂದ ಬಳಸಬೇಕೆಂದು ಆಗ್ರಹಿಸಿವೆ.

    ಪ್ರಾಣಿ ಕಲ್ಯಾಣ ಸಂಘಟನೆಗಳು ಕೂಡ ಆತಂಕ ವ್ಯಕ್ತಪಡಿಸಿದ್ದು, ಕರಾವಳಿಯ ಹವಾಮಾನಕ್ಕೆ ಹೊಂದಿಕೊಂಡಿರುವ ಕಂಬಳದ ಕೋಣಗಳನ್ನು ನೂರಾರು ಕಿಲೋಮೀಟರ್ ದೂರ ಮೈಸೂರಿಗೆ ಸಾಗಿಸುವುದರಿಂದ ಅವುಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿವೆ.

    ಈ ಹಿನ್ನೆಲೆಯಲ್ಲಿ ಮೈಸೂರಿನ ಪ್ರಗತಿಪರ ಚಿಂತಕರು, ಹೆರಿಟೇಜ್ ತಜ್ಞರು, ಪರಿಸರ ಹೋರಾಟಗಾರರು ಹಾಗೂ ರೈತ ಸಂಘಟನೆಗಳು ಒಟ್ಟಾಗಿ ಹೋರಾಟ ಸಮಿತಿಯನ್ನು ರಚಿಸಿದ್ದು, ಸರ್ಕಾರವು ಕಂಬಳ ಆಯೋಜನೆ ಕುರಿತ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದರ ಜೊತೆಗೆ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಸರ್ಕಾರ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಸಿದ್ಧತೆಗಳನ್ನು ಮುಂದುವರಿಸಿದೆ.




    #dakshinakannada #karnataka
    Previous Articleದಕ್ಷಿಣ ಕನ್ನಡದಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    Next Article ಬಿ.ಸಿ.ರೋಡ್‌ನಲ್ಲಿ ಯುವತಿ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಾಗಿ ಪೊಲೀಸರ ಬಲೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.