Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ಭೀಕರ: ಕ್ಷಿಪಣಿ, ಡ್ರೋನ್ ದಾಳಿಗಳ ಅಬ್ಬರ
    ಅಂತರಾಷ್ಟ್ರೀಯ

    ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ಭೀಕರ: ಕ್ಷಿಪಣಿ, ಡ್ರೋನ್ ದಾಳಿಗಳ ಅಬ್ಬರ

    adminBy adminJuly 17, 2026No Comments2 Mins Read

    ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣಕ್ಕಾಗಿ ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ಸದ್ಯ ಮಹಾಯುದ್ಧದ ರೂಪ ತಾಳಿದೆ. ಸತತ ಆರನೇ ರಾತ್ರಿಯೂ ಉಭಯ ದೇಶಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಅಮೆರಿಕ ಸೇನೆಯು ಇರಾನಿನ ನಾಗರಿಕ ಮೂಲಸೌಕರ್ಯಗಳಾದ ಮೂರು ಪ್ರಮುಖ ಸೇತುವೆಗಳು, ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ.

    ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ಬಿಗಿಹಿಡಿತವನ್ನು ಸಡಿಲಿಸುವಂತೆ ಟೆಹ್ರಾನ್ ಮೇಲೆ ಒತ್ತಡ ಹೇರಲು ಇರಾನ್‌ನ ಮೂಲಸೌಕರ್ಯಗಳನ್ನೇ ಗುರಿಯಾಗಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಎಚ್ಚರಿಕೆಯ ಬೆನ್ನಲ್ಲೇ ಈ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕದ ದಾಳಿಗೆ ಇರಾನ್‌ನ ದಕ್ಷಿಣ ಕರಾವಳಿ ನಗರಗಳು ನಲುಗಿಹೋಗಿವೆ. ಅಹ್ವಾಜ್, ಕೆಶ್ಮ್, ಬುಶೆಹರ್, ದಶ್ತಿ, ಬೋಸ್ತಾನ್, ಸಿರಿಕ್ ಹಾಗೂ ಬಂದರ್-ಎ-ಲೆಂಗೆಹ್‌ ನಗರಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ್ದು, ವ್ಯಾಪಕ ಹಾನಿಯಾಗಿದೆ. ಬಂದರ್-ಎ-ಖಮಿರ್‌ನ ಮೂರು ಸೇತುವೆಗಳು ಸಂಪೂರ್ಣ ನೆಲಸಮವಾಗಿದ್ದು, ಬಂದರ್ ಅಬ್ಬಾಸ್ ಮತ್ತು ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ರಸ್ತೆ ಹಾಗೂ ರೈಲ್ವೆ ಮೂಲಸೌಕರ್ಯಗಳು ಧ್ವಂಸಗೊಂಡಿವೆ. ಇರಾನ್‌ಶಹರ್ ವಿಮಾನ ನಿಲ್ದಾಣ ಹಾಗೂ ಪ್ರಸಿದ್ಧ ಕಿಶ್ ದ್ವೀಪದ ಮೇಲೆಯೂ ದಾಳಿ ನಡೆದಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಈ ದಾಳಿಗಳಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ರಾಜ್ಯ ದೂರದರ್ಶನ ವರದಿ ಮಾಡಿದೆ.

    ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿರುವ ಇರಾನ್, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಮಿತ್ರರಾಷ್ಟ್ರಗಳ ಮೇಲೆ ನೂರಾರು ಕ್ಷಿಪಣಿ ಹಾಗೂ ಸರಣಿ ಡ್ರೋನ್ ದಾಳಿಗಳನ್ನು ನಡೆಸಿದೆ. ಜೋರ್ಡಾನ್‌ನಲ್ಲಿರುವ ಅಮೆರಿಕದ ಪ್ರಮುಖ ವಾಯುನೆಲೆ, ಬಹ್ರೇನ್, ಕುವೈತ್ ಹಾಗೂ ಕತಾರ್ ದೇಶಗಳನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ಮಾಡಿದೆ. ಕತಾರ್‌ನಲ್ಲಿ ಹಾನಿ ತಡೆಯಲು ಸಾರ್ವಜನಿಕರು ತಕ್ಷಣವೇ ಸುರಕ್ಷಿತ ಆಶ್ರಯ ಪಡೆಯುವಂತೆ ಅಲ್ಲಿನ ಸರ್ಕಾರಗಳು ನಾಗರಿಕರಿಗೆ ತುರ್ತು ಎಚ್ಚರಿಕೆ ನೀಡಿವೆ. ಈ ಮಧ್ಯೆ, ಕತಾರ್ ಮತ್ತು ಪಾಕಿಸ್ತಾನ ಜಂಟಿಯಾಗಿ ನಡೆಸುತ್ತಿದ್ದ ಶಾಂತಿ ಮಾತುಕತೆಗಳು ಸಂಪೂರ್ಣವಾಗಿ ಮುರಿದುಬಿದ್ದಿವೆ.
    ಅಮೆರಿಕದ ಮಿಲಿಟರಿ ಸೆಂಟ್ರಲ್ ಕಮಾಂಡ್ (CENTCOM) ಶುಕ್ರವಾರ ಮುಂಜಾನೆ ಹೇಳಿಕೆ ಬಿಡುಗಡೆ ಮಾಡಿದ್ದು, “ನಮ್ಮ ಯುದ್ಧ ವಿಮಾನಗಳು, ಡೆತ್ ಡ್ರೋನ್‌ಗಳು ಹಾಗೂ ಅತ್ಯಾಧುನಿಕ ಯುದ್ಧನೌಕೆಗಳು ಇರಾನಿನ ಕರಾವಳಿ ಕಣ್ಗಾವಲು ವಲಯ, ವಾಯು ರಕ್ಷಣಾ ತಾಣ ಹಾಗೂ ಸೇನಾ ಸರಬರಾಜು ಕೇಂದ್ರಗಳ ಮೇಲೆ ನಿಖರ ದಾಳಿ ನಡೆಸಿವೆ. ಮಧ್ಯಪ್ರಾಚ್ಯದಲ್ಲಿ ನಮ್ಮ 50 ಸಾವಿರಕ್ಕೂ ಹೆಚ್ಚು ಸೈನಿಕರು ಜಾಗರೂಕರಾಗಿದ್ದು, ಯಾವುದೇ ಕ್ಷಣದಲ್ಲೂ ಯುದ್ಧಕ್ಕೆ ಸಿದ್ಧರಾಗಿದ್ದಾರೆ,” ಎಂದು ತಿಳಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪವನ್ನು ಸಹಿಸುವುದಿಲ್ಲ, ಇದು ಇರಾನ್‌ನ ಅಜೇಯ ಕೆಂಪು ರೇಖೆ ಎಂದು ಇರಾನ್ ಸೇನೆ ಗುಡುಗಿದೆ.




    International
    Previous Articleಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಅರೆಸ್ಟ್
    Next Article ಲಾವಣ್ಯ ಕೊಲೆ ಪ್ರಕರಣ – ತಲ್ವಾರ್‌ನಿಂದ ಕೊಚ್ಚಿ ಕೊಂದ ಹಂತಕ ಚೇತನ್ ವಿಚಾರಣೆ ನಡೆಸುತ್ತಿದ್ದಾಗ ಬಯಲಾಯ್ತು ಆಘಾತಕಾರಿ ಸತ್ಯ!

    Related Posts

    ಓಣಂ ಆಚರಿಸಲು ತಾಯಿಯ ಬಳಿಗೆ ಹೋಗಿದ್ದ ಬಾಲಕನ ದಾರುಣ ಅಂತ್ಯ

    September 1, 2026

    ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    August 31, 2026

    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್; ಒಡೆದು ₹57 ಲಕ್ಷ ದೋಚಿದ 29 ಮಂದಿ ಅರೆಸ್ಟ್

    August 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.