Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ
    ಕರ್ನಾಟಕ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    adminBy adminJuly 18, 2026Updated:July 18, 2026No Comments2 Mins Read

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ  ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ.  ಉಸಿರಾಟದ ಸಮಸ್ಯೆಯಿಂದಾಗಿ  ಚೆನ್ನಮ್ಮ  ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

    ಆಸ್ಪತ್ರೆ ಬಳಿ ಭದ್ರತೆ

    ಚೆನ್ನಮ್ಮನ ಅಂತಿಮ ದರ್ಶನ ಪಡೆಯಲು ಗಣ್ಯರು ಮತ್ತು ಸಂಬಂಧಿಕರು ಮಣಿಪಾಲ್ ಆಸ್ಪತ್ರೆ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಸಹ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಭದ್ರತೆ ಪರಿಶೀಲನೆ ಮಾಡಿದರು.

    ದೇವೇಗೌಡರ ಬೆನ್ನೆಲುಬಾಗಿದ್ದ ಚನ್ನಮ್ಮ

    ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.

    ಚನ್ನಮ್ಮ ಅವರ ಮೇಲೆ ನಡೆದಿತ್ತು ಆ್ಯಸಿಡ್​​ ದಾಳಿ!

    2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚನ್ನಮ್ಮ, ಅಂದಿನ ಕಾಲದಲ್ಲೇ SSLC ವರೆಗೆ ಶಿಕ್ಷಣ ಪೂರೈಸಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು.

     

     




    #karnataka
    Previous Articleಅಕ್ರಮ ಕೋಳಿ ಅಂಕದ ಮೇಲೆ ಪೊಲೀಸರ ದಾಳಿ; ಐವರು ವಿರುದ್ಧ ಪ್ರಕರಣ ದಾಖಲು
    Next Article ಮುಂಬೈ ಪೊಲೀಸ್ ಹೆಸರಿನಲ್ಲಿ ಕರೆ; ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚನೆ

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.