Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು ಬಂದರ್‌ನಲ್ಲಿ ನೀರಿಗೆ ಬಿದ್ದ ಮಹಿಳೆ; ಮೀನುಗಾರರಿಂದ ಸಾಹಸಮಯ ರಕ್ಷಣೆ
    ಅಪರಾಧ

    ಮಂಗಳೂರು ಬಂದರ್‌ನಲ್ಲಿ ನೀರಿಗೆ ಬಿದ್ದ ಮಹಿಳೆ; ಮೀನುಗಾರರಿಂದ ಸಾಹಸಮಯ ರಕ್ಷಣೆ

    adminBy adminJuly 21, 2026No Comments2 Mins Read

    ಬೆಂಗಳೂರು: ಸೈಬರ್ ವಂಚಕರು ದಿನಕ್ಕೊಂದು ಹೊಸ ಪ್ರಯೋಗ ಮಾಡುತ್ತಿದ್ದು , ವಾಟ್ಸಪ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಾಗ ತೆರೆಯುವ ಮುನ್ನ ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ.

    ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಾಟ್ಸಪ್‌ಗೆ ಬರುವ ಅಪರಿಚಿತ ಲಿಂಕ್‌ ಅಥವಾ ಫೈಲ್‌ಗಳನ್ನು ಕ್ಲಿಕ್‌ ಮಾಡಿ ಹಣ ಕಳೆದುಕೊಂಡ ಘಟನೆಗಳು ಆಗಾಗ ಕೇಳಿಬರುತ್ತಲೇ ಇವೆ. ಇದೀಗ ಅದೇ ರೀತಿಯಲ್ಲಿ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಹೆಸರಿನಲ್ಲಿ APK ಫೈಲ್ ಕಳುಹಿಸಿ ಸರ್ಕಾರಿ ಅಧಿಕಾರಿಯೊಬ್ಬರಿಗೆ ಸುಮಾರು 9.96 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

    ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಮೇಶ್ ಬಾಬು ಅವರಿಗೆ ಜುಲೈ 14ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಸಂದೇಶ ಬಂದಿದೆ. ಸ್ನೇಹಿತ ಅಥವಾ ಪರಿಚಿತರದ್ದಿರಬಹುದು ಎಂದು ಭಾವಿಸಿ ಅವರು ಆ ಫೈಲ್ ಅನ್ನು ಮಾಡಿದ್ದಾರೆ. ಫೈಲ್ ಓಪನ್ ಮಾಡಿದ ಬಳಿಕ ಅದು APK ಫೈಲ್ ಎಂಬುದು ಗೊತ್ತಾಗಿದೆ. ಆಗ ಅದನ್ನು ಹೆಚ್ಚಿನ ಗಮನ ಕೊಡದೆ ಬಿಟ್ಟಿದ್ದಾರೆ. ಆದರೆ 15 ನಿಮಿಷಗಳಲ್ಲಿ ಅವರ ಮೊಬೈಲ್‌ಗೆ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಸಂದೇಶಗಳು ಬರಲು ಆರಂಭಿಸಿವೆ.

    ತಕ್ಷಣ ಬ್ಯಾಂಕ್ ಖಾತೆ ಪರಿಶೀಲಿಸಿದಾಗ, ಸುಮಾರು 9 ಲಕ್ಷ 96 ಸಾವಿರ ಹಣ ವಿವಿಧ ಹಂತಗಳಲ್ಲಿ ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಇದರಿಂದ ಬೆಚ್ಚಿಬಿದ್ದ ರಮೇಶ್ ಬಾಬು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ಸಂಖ್ಯೆಯಿಂದ ಬರುವ APK ಫೈಲ್‌ಗಳು, ಲಿಂಕ್‌ಗಳು ಅಥವಾ ಮದುವೆ ಆಹ್ವಾನದಂತಹ ಸಂದೇಶಗಳನ್ನು ಯಾವುದೇ ಕಾರಣಕ್ಕೂ ಓಪನ್ ಮಾಡಬಾರದು ಎಂದು ಸೈಬರ್ ತಜ್ಞರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

    APK ಎಂದರೇನು?

    ಎಪಿಕೆ (APK) ಎಂದರೆ ಆಂಡ್ರಾಯ್ಡ್ ಮೊಬೈಲ್‌ಗಳಲ್ಲಿ ಅಪ್ಲಿಕೇಶನ್‌ಗಳನ್ನು (Apps) ಇನ್‌ಸ್ಟಾಲ್ ಮಾಡಲು ಬಳಸುವ ಒಂದು ಫೈಲ್ ಫಾರ್ಮ್ಯಾಟ್ ಆಗಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಸಿಗದ ಆ್ಯಪ್‌ಗಳನ್ನು ಇಂಟರ್ನೆಟ್‌ನಿಂದ ನೇರವಾಗಿ ಡೌನ್‌ಲೋಡ್ ಮಾಡಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್‌ ಮಾಡಲು ಈ ಫೈಲ್‌ಗಳನ್ನು ಬಳಸಲಾಗುತ್ತದೆ.

    ಇವು ಕಂಪ್ಯೂಟರ್‌ನಲ್ಲಿರುವ .exe ಫೈಲ್‌ಗಳಿದ್ದಂತೆ. ಎಪಿಕೆ ಫೈಲ್‌ಗಳು ಆಂಡ್ರಾಯ್ಡ್‌ಗೆ ಅತ್ಯಂತ ಉಪಯುಕ್ತವಾಗಿದ್ದರೂ, ಸೈಬರ್ ವಂಚಕರು ಇವುಗಳ ಮೂಲಕ ಮೊಬೈಲ್ ಹ್ಯಾಕ್ ಮಾಡಿ ಹಣ ದೋಚುವ ಸಾಧ್ಯತೆ ಇರುತ್ತದೆ.

    ವಾಟ್ಸಾಪ್, ಟೆಲಿಗ್ರಾಮ್ ಅಥವಾ ಅಪರಿಚಿತ ಲಿಂಕ್‌ಗಳ ಮೂಲಕ ಬರುವ ಎಪಿಕೆ ಫೈಲ್‌ಗಳನ್ನು ಕ್ಲಿಕ್ ಮಾಡಿ ಇನ್‌ಸ್ಟಾಲ್ ಮಾಡಿಕೊಳ್ಳಬೇಡಿ. ಇವುಗಳಲ್ಲಿ ವೈರಸ್ ಅಥವಾ ಬ್ಯಾಂಕ್ ಖಾಲಿ ಮಾಡುವ ಮಾಲ್‌ವೇರ್ ಇರಬಹುದು. ಯಾವಾಗಲೂ ಗೂಗಲ್ ಪ್ಲೇ ಸ್ಟೋರ್ ನಂತಹ ಅಧಿಕೃತ ಮೂಲಗಳಿಂದ ಮಾತ್ರ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಸುರಕ್ಷಿತ.




    #crime #karnataka
    Previous Articleಮಂಗಳೂರು ಬಂದರ್‌ನಲ್ಲಿ ನೀರಿಗೆ ಬಿದ್ದ ಮಹಿಳೆ; ಮೀನುಗಾರರಿಂದ ಸಾಹಸಮಯ ರಕ್ಷಣೆ
    Next Article ಲಾವಣ್ಯ ಹತ್ಯೆ ಆರೋಪಿ ಚೇತನ್ ಸೆರೆಗೆ ದಿನಗೂಲಿ ಕಾರ್ಮಿಕ ಗಿರೀಶ್ ನ ಸಾಹಸ

    Related Posts

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.