Close Menu
    What's Hot

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ; ಆರೋಪಿಗಾಗಿ ಪೊಲೀಸರ ಶೋಧ
    ಅಪರಾಧ

    ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ; ಆರೋಪಿಗಾಗಿ ಪೊಲೀಸರ ಶೋಧ

    adminBy adminJuly 25, 2026Updated:July 25, 2026No Comments1 Min Read

    ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯುವಕನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಗಾಯಗೊಂಡ ಯುವಕನನ್ನು ಪ್ರಾಥಮಿಕವಾಗಿ ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಅವರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಮತ್ತೊಂದು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಅಪರಿಚಿತ ವ್ಯಕ್ತಿ ಏಕಾಏಕಿ ಮಾರಕಾಸ್ತ್ರದಿಂದ ಅವರ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

    ದಾಳಿಯ ಪರಿಣಾಮ ಕುತ್ತಿಗೆಯ ಸಮೀಪ ಆಳವಾದ ಗಾಯವಾಗಿದ್ದು, ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿ ಪರಾರಿಯಾಗಿರುವ ಆರೋಪಿಯ ಪತ್ತೆಗಾಗಿ ನಗರದ ವಿವಿಧೆಡೆ ಇರುವ ಚೆಕ್‌ಪೋಸ್ಟ್‌ಗಳಿಗೆ ಮಾಹಿತಿ ರವಾನಿಸಲಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

    ಈ ಪ್ರಕರಣವು ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಲಿದ್ದು, ಪೂರ್ವ ಉಪವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

    ಇನ್ನು, ಹಲ್ಲೆಗೊಳಗಾದ ವ್ಯಕ್ತಿ ರೌಡಿ ಶೀಟರ್ ಆಗಿದ್ದು, ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ನಿಗಾದಲ್ಲಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದಾಳಿಯ ಹಿಂದಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹಳೆಯ ವೈಷಮ್ಯ ಸೇರಿದಂತೆ ವಿವಿಧ ಸಾಧ್ಯತೆಗಳನ್ನು ಪರಿಗಣಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




    #crime #dakshinakannada
    Previous Articleವೈದ್ಯನಿಂದ 100 ಮಹಿಳೆಯರ ಮೇಲೆ ಅತ್ಯಾಚಾರ ಆರೋಪ; ಬಂಧಿತ ನರ್ಸ್‌ನ ಸ್ಫೋಟಕ ಹೇಳಿಕೆ
    Next Article ‘ಕಾಕ್ರೋಚ್ ಜನತಾ ಪಾರ್ಟಿ’ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    Related Posts

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.