ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ.
ವಿಪಕ್ಷಗಳ ಗದ್ದಲ ನಡುವೆಯೇ ಮಸೂದೆ ಅಂಗೀಕರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆದುಕೊಳ್ಳಲಿದೆ.
ಹೊಸ ಕಾನೂನಿನ ಅನ್ವಯ ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗುವವರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆಯನ್ನೂ ಪ್ರಸ್ತಾಪಿಸಲಾಗಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ, ಜೊತೆಗೆ 10 ಕೋಟಿ ರೂ. ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಇದು ಸಂಘಟಿತ ಪರೀಕ್ಷಾ ಅಕ್ರಮಗಳ ವಿರುದ್ಧದ ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದಾಗಲಿದೆ ಎಂದು ಹೇಳಲಾಗಿದೆ.








