Close Menu
    What's Hot

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರಿಗೆ ಕ್ರೂಸ್ ಸೇವೆ ತರಲು ಸರ್ಕಾರದ ಪ್ರಯತ್ನ; ಮುಂದಿನ ತಿಂಗಳು ತಾಂತ್ರಿಕ ತಂಡ ಭೇಟಿ
    ಕರಾವಳಿ ಸುದ್ದಿ

    ಮಂಗಳೂರಿಗೆ ಕ್ರೂಸ್ ಸೇವೆ ತರಲು ಸರ್ಕಾರದ ಪ್ರಯತ್ನ; ಮುಂದಿನ ತಿಂಗಳು ತಾಂತ್ರಿಕ ತಂಡ ಭೇಟಿ

    adminBy adminAugust 1, 2026No Comments2 Mins Read

    ಬೆಂಗಳೂರು: ಕರ್ನಾಟಕದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ದೇಶದ ಪ್ರಮುಖ ಕ್ರೂಸ್ ಸೇವಾ ಸಂಸ್ಥೆಗಳೊಂದಿಗೆ ಸಮಾಲೋಚನೆ ಆರಂಭಿಸಿದೆ. ಇದರ ಭಾಗವಾಗಿ, ಭಾರತದ ಪ್ರಮುಖ ಕ್ರೂಸ್ ಕಂಪನಿಗಳಲ್ಲೊಂದಾದ ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಯನ್ನು ಪರಿಶೀಲಿಸಲು ತಾತ್ವಿಕ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ತಿಳಿಸಿದ್ದಾರೆ.

    ಇತ್ತೀಚೆಗೆ ಕಾರ್ಯದರ್ಶಿಗಳ ನೇತೃತ್ವದ ಹಿರಿಯ ಅಧಿಕಾರಿಗಳ ನಿಯೋಗವು ಮುಂಬೈನಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜುರ್ಗೆನ್ ಬೈಲೊಮ್ ಮತ್ತು ಸಹ ನಿರ್ದೇಶಕ ಭರತ್ ಆಚಾರ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿತು. ಈ ಸಭೆಯಲ್ಲಿ ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ಅಗತ್ಯವಿರುವ ಮೂಲಸೌಕರ್ಯ, ಕಾರ್ಯಾಚರಣೆಯ ಅಗತ್ಯತೆಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

    ಈ ವೇಳೆ ಸಂಸ್ಥೆಯ ಪ್ರತಿನಿಧಿಗಳು ಮಂಗಳೂರು ಕರಾವಳಿ ಪ್ರದೇಶದ ಪ್ರವಾಸೋದ್ಯಮ ಮಾರುಕಟ್ಟೆ, ಪ್ರವಾಸಿಗರ ಬೇಡಿಕೆ ಹಾಗೂ ವಾಣಿಜ್ಯ ಸಾಮರ್ಥ್ಯದ ಬಗ್ಗೆ ಸಮಗ್ರ ಅಧ್ಯಯನ ನಡೆಸುವ ಅಗತ್ಯವಿದೆ. ಜೊತೆಗೆ, ಮಂಗಳೂರು ಕರಾವಳಿಯನ್ನು ದೇಶೀಯ ಹಾಗೂ ಅಂತರರಾಷ್ಟ್ರೀಯ ಕ್ರೂಸ್ ಪ್ರವಾಸೋದ್ಯಮ ತಾಣವಾಗಿ ಗುರುತಿಸುವ ಉದ್ದೇಶದಿಂದ ವಿಶೇಷ ಪ್ರಚಾರ ಕಾರ್ಯತಂತ್ರ ರೂಪಿಸುವಂತೆ ಸಲಹೆ ನೀಡಿದರು.

    ಇದರಂತೆ, ಮುಂದಿನ ತಿಂಗಳು ಸಂಸ್ಥೆಯ ತಾಂತ್ರಿಕ ತಂಡ ಮಂಗಳೂರಿಗೆ ಭೇಟಿ ನೀಡಿ ಬಂದರು ಮೂಲಸೌಕರ್ಯ, ಪ್ರವಾಸೋದ್ಯಮದ ಸಾಧ್ಯತೆ, ಕಾರ್ಯಾಚರಣೆಯ ಅನುಕೂಲತೆ ಹಾಗೂ ಕ್ರೂಸ್ ಸೇವೆ ಆರಂಭಿಸಲು ಅಗತ್ಯವಿರುವ ಸೌಲಭ್ಯಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಿದೆ. ಇದೇ ವೇಳೆ, ರಾಜ್ಯದಲ್ಲಿ ಕ್ರೂಸ್ ಪ್ರವಾಸೋದ್ಯಮಕ್ಕೆ ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವು ಇತ್ತೀಚೆಗೆ ಮುಂಬೈ ಅಂತರರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ಗೆ ಭೇಟಿ ನೀಡಿ ಅಲ್ಲಿನ ಪ್ರಯಾಣಿಕರ ಸೌಲಭ್ಯಗಳು, ಟರ್ಮಿನಲ್ ನಿರ್ವಹಣೆ ಹಾಗೂ ಕಾರ್ಯಾಚರಣಾ ವ್ಯವಸ್ಥೆಗಳನ್ನು ಅಧ್ಯಯನ ಮಾಡಿದೆ.

    ಈ ಅಧ್ಯಯನದ ಆಧಾರದ ಮೇಲೆ, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೂಸ್ ಟರ್ಮಿನಲ್ ನಿರ್ಮಾಣದ ಸಾಧ್ಯತಾ ಅಧ್ಯಯನವನ್ನು ಕೈಗೊಳ್ಳುವಂತೆ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, “ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಕ್ರೂಸ್ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ. ಪ್ರಮುಖ ಉದ್ಯಮ ಸಂಸ್ಥೆಗಳೊಂದಿಗೆ ಕೈಜೋಡಿಸಿ ಅಗತ್ಯ ಮೂಲಸೌಕರ್ಯ ಹಾಗೂ ಅನುಕೂಲಕರ ಪರಿಸರ ನಿರ್ಮಿಸುವ ಮೂಲಕ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಈ ಯೋಜನೆಯಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಉದ್ಯೋಗ ಸೃಷ್ಟಿ ಹಾಗೂ ಹೂಡಿಕೆ ಅವಕಾಶಗಳು ಹೆಚ್ಚಲಿವೆ” ಎಂದು ಹೇಳಿದರು.

    ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, “ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಯನ್ನು ಪರಿಶೀಲಿಸಲು ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ನೀಡಿರುವ ತಾತ್ವಿಕ ಒಪ್ಪಿಗೆ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ಹಂತದಲ್ಲಿ ಸಂಸ್ಥೆಯ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ನಡೆಸಲಿದ್ದು, ಅದರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಇದೇ ವೇಳೆ, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೂಸ್ ಟರ್ಮಿನಲ್ ಸ್ಥಾಪಿಸುವ ಸಾಧ್ಯತೆಯನ್ನೂ ಇಲಾಖೆ ಪರಿಶೀಲಿಸುತ್ತಿದೆ” ಎಂದು ತಿಳಿಸಿದರು.




    #dakshinakannada #karnataka
    Previous Articleಅಪ್ರಾಪ್ತೆಯ ಮೇಲೆ ಅತ್ಯಾಚಾರ; ನಗ್ನ ಚಿತ್ರ ವೈರಲ್ ಬೆದರಿಕೆ – ಆರೋಪಿಗೆ 20 ವರ್ಷ ಜೈಲು
    Next Article ಮೂರು ದಿನಗಳ ಬಳಿಕ ಜೀವಂತ ಪತ್ತೆ-ಚರಂಡಿಯಲ್ಲಿ ಪತ್ತೆಯಾದ ವೃದ್ಧ ಅಪಾಯದಿಂದ ಪಾರು

    Related Posts

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಮೊಟ್ಟೆ ಸಾಗಾಟದ ವಾಹನದಲ್ಲಿ ದನಗಳ ಅಕ್ರಮ ಸಾಗಾಟ; ಮಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

    November 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.