Close Menu
    What's Hot

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಎಕ್ಸ್-ರೇ ಕೊಠಡಿಯಲ್ಲಿ ಬಾಂಬ್ ತಯಾರಿಕೆ ಸೂಚನೆ; ಮೆಡಿಕಲ್ ವಿದ್ಯಾರ್ಥಿ ಪೊಲೀಸರ ವಶಕ್ಕೆ
    ರಾಷ್ಟ್ರೀಯ

    ಎಕ್ಸ್-ರೇ ಕೊಠಡಿಯಲ್ಲಿ ಬಾಂಬ್ ತಯಾರಿಕೆ ಸೂಚನೆ; ಮೆಡಿಕಲ್ ವಿದ್ಯಾರ್ಥಿ ಪೊಲೀಸರ ವಶಕ್ಕೆ

    adminBy adminAugust 3, 2026No Comments2 Mins Read

    ಉತ್ತರ ಪ್ರದೇಶ: ಅಯೋಧ್ಯೆಯ ರಾಜರ್ಷಿ ದಶರಥ ಸ್ವಾಯತ್ತ ರಾಜ್ಯ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ತಯಾರಿಸುವ ವಿಧಾನವನ್ನು ವಿವರಿಸುವ ಆತಂಕಕಾರಿ ಕೈಬರಹದ ಚೀಟಿಯೊಂದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಂಧಿತ ವಿದ್ಯಾರ್ಥಿಯನ್ನು ಬಲರಾಮ್‌ಪುರ ಮೂಲದ ಸರ್ಫರಾಜ್ ಖಾನ್ ಎಂದು ಗುರುತಿಸಲಾಗಿದೆ. ಈತ ಕಾಲೇಜಿನಲ್ಲಿ 2025ರ ಬ್ಯಾಚ್‌ನ ಎಕ್ಸ್-ರೇ ಟೆಕ್ನಿಷಿಯನ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

    ಎಕ್ಸ್-ರೇ ಕೊಠಡಿಯಲ್ಲಿ ಪತ್ತೆಯಾಯ್ತು ರಹಸ್ಯ ಚೀಟಿ

    ಶನಿವಾರ ಬೆಳಿಗ್ಗೆ ಕಾಲೇಜಿನ ಎಕ್ಸ್-ರೇ ಕೊಠಡಿಗೆ ಕರ್ತವ್ಯಕ್ಕಾಗಿ ಆಗಮಿಸಿದ ಕೆಲವು ವಿದ್ಯಾರ್ಥಿಗಳಿಗೆ ಈ ಅನುಮಾನಾಸ್ಪದ ಚೀಟಿ ಸಿಕ್ಕಿದೆ. ಆ ಚೀಟಿಯಲ್ಲಿ ಬಾಂಬ್ ತಯಾರಿಸಲು ಬೇಕಾಗುವ ವಸ್ತುಗಳಾದ ಅಮೋನಿಯಂ ಕಾರ್ಬೋನೇಟ್, ಗೇಜ್ ವೈರ್, ರೆಡ್ ಸಲ್ಫೈಡ್ ಮುಂತಾದ ರಾಸಾಯನಿಕ ಹಾಗೂ ಸಾಧನಗಳ ಕುರಿತು ವಿವರವಾದ ಮಾಹಿತಿಯನ್ನು ಬರೆಯಲಾಗಿತ್ತು. ವಿದ್ಯಾರ್ಥಿಗಳು ಕೂಡಲೇ ಈ ವಿಷಯವನ್ನು ತಮ್ಮ ಮೇಲ್ವಿಚಾರಕರಿಗೆ ತಿಳಿಸಿದ್ದು, ಬಳಿಕ ಕಾಲೇಜು ಆಡಳಿತ ಮಂಡಳಿಯು ಪೊಲೀಸರಿಗೆ ಮಾಹಿತಿ ನೀಡಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಕಾಲೇಜಿನ ಮುಖ್ಯ ವೈದ್ಯಕೀಯ ಸೂಪರಿಂಟೆಂಡೆಂಟ್ (ಸಿಎಂಎಸ್) ಡಾ. ಅರವಿಂದ್ ಸಿಂಗ್, “ಬೆಳಿಗ್ಗೆ ಎಕ್ಸ್-ರೇ ಕೊಠಡಿಯಲ್ಲಿ ಬಾಂಬ್ ತಯಾರಿಕೆಗೆ ಸಂಬಂಧಿಸಿದ ಅನುಮಾನಾಸ್ಪದ ಟಿಪ್ಪಣಿ ಸಿಕ್ಕ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದರು. ನಾವು ತಕ್ಷಣ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಸರ್ಫರಾಜ್ ಖಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಮತ್ತು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

    ದೆಹಲಿ ಕೆಂಪುಕೋಟೆ ಸ್ಫೋಟದ ಘಟನೆ ಮರುಕಳಿಸುವ ಭೀತಿ!

    ಅಯೋಧ್ಯೆಯ ಈ ಘಟನೆಯು ಕಳೆದ ವರ್ಷ ದೆಹಲಿಯ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಫೋಟದ ನೆನಪನ್ನು ಮರುಕಳಿಸುವಂತೆ ಮಾಡಿದೆ. ನವೆಂಬರ್ 10 ರಂದು ನಡೆದಿದ್ದ ಆ ಸ್ಫೋಟದಲ್ಲಿ 15 ಜನರು ಪ್ರಾಣ ಕಳೆದುಕೊಂಡಿದ್ದರು. ಆ ಪ್ರಕರಣದ ತನಿಖೆ ನಡೆಸಿದ ಭದ್ರತಾ ಸಂಸ್ಥೆಗಳು ಹರ್ಯಾಣದ ಫರೀದಾಬಾದ್‌ನಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಮೂವರು ವೈದ್ಯರು ಸೇರಿದಂತೆ ನೌಕರರ ಪಾತ್ರವನ್ನು ಬಯಲಿಗೆಳೆದಿದ್ದವು.

    ಪ್ರಸ್ತುತ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಅಧ್ಯಕ್ಷ ಜಾವೇದ್ ಅಹ್ಮದ್ ಸಿದ್ದಿಕಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ಸಿದ್ದಿಕಿ ತನ್ನ ಪತ್ನಿಯ ಅನಾರೋಗ್ಯದ ಕಾರಣ ನೀಡಿ ಸಲ್ಲಿಸಿದ್ದ 6 ವಾರಗಳ ಮಧ್ಯಂತರ ಜಾಮೀನು ಅರ್ಜಿಯನ್ನು ಇತ್ತೀಚೆಗಷ್ಟೇ ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಈಗ ವೈದ್ಯಕೀಯ ಶಿಕ್ಷಣ ಸಂಸ್ಥೆಯೊಂದರಲ್ಲೇ ಮತ್ತೆ ಇಂತಹ ಆತಂಕಕಾರಿ ಘಟನೆ ನಡೆದಿರುವುದು ಭದ್ರತಾ ಸಂಸ್ಥೆಗಳ ನಿದ್ದೆಗೆಡಿಸಿದೆ.




    #nation #national
    Previous Articleಉಪ್ಪಿನಂಗಡಿ: ನೇತ್ರಾವತಿ ನದಿ ತೀರದಲ್ಲಿ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆ
    Next Article ವೀಸಾ ನಿಯಮ ಉಲ್ಲಂಘನೆ ಆರೋಪ; ದೆಹಲಿ ಪೊಲೀಸರಿಂದ 6 ಮಂದಿ ಬಾಂಗ್ಲಾದೇಶಿಗರ ಬಂಧನ

    Related Posts

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ದೆಹಲಿಯಲ್ಲಿ ಕಟ್ಟಡ ಕುಸಿತದ ದುರಂತ; ಮೂರು ವರ್ಷದ ಮಗು ಸೇರಿ ಇಬ್ಬರು ದುರ್ಮರಣ, ಆರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

    November 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.