ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸಚಿವ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಈ ಬಾರಿ ಸಚಿವ ಸ್ಥಾನ ಲಭ್ಯವಾಗಿಲ್ಲ.
ಸಂಪುಟ ರಚನೆ ವೇಳೆ ಹಲವು ಹಾಲಿ ಸಚಿವರು ಹಾಗೂ ಹಿರಿಯ ನಾಯಕರಿಗೆ ಸ್ಥಾನ ಕೈತಪ್ಪಿದೆ. ಎಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್, ಎಚ್.ಕೆ. ಪಾಟೀಲ್, ಕೆ. ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್ ಹಾಗೂ ಶರಣ ಬಸಪ್ಪ ದರ್ಶನಾಪುರ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ.ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಹಿರಿಯ ನಾಯಕರನ್ನು ಕೈಬಿಟ್ಟು ಬದಲಾವಣೆ ತರಲಾಗಿದೆ.








