Close Menu
    What's Hot

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಟ್ರಂಪ್ ಸುಂಕ ನೀತಿ ರದ್ದು; ಅಮೆರಿಕ ಕಂಪನಿಗಳಿಗೆ ಭರ್ಜರಿ ರಿಫಂಡ್
    ಅಂತರಾಷ್ಟ್ರೀಯ

    ಟ್ರಂಪ್ ಸುಂಕ ನೀತಿ ರದ್ದು; ಅಮೆರಿಕ ಕಂಪನಿಗಳಿಗೆ ಭರ್ಜರಿ ರಿಫಂಡ್

    adminBy adminAugust 6, 2026No Comments2 Mins Read

    ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಆಡಳಿತವು ವಿದೇಶಿ ಆಮದುಗಳ ಮೇಲೆ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು  ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ, ಯುಎಸ್ ಸರ್ಕಾರವು ಕಂಪನಿಗಳಿಗೆ 100 ಶತಕೋಟಿ ಡಾಲರ್ ಮರುಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಅಮೆರಿಕ ಸುಪ್ರೀಂ ಕೋರ್ಟ್ ಟ್ರಂಪ್ ಅವರ ಸುಂಕ ನೀತಿಯನ್ನು ‘ಕಾನೂನುಬಾಹಿರ’ ಎಂದು ಘೋಷಿಸಿದ್ದು, ಒಟ್ಟು 166 ಬಿಲಿಯನ್ ಡಾಲರ್ ಧನಸಹಾಯ ಮತ್ತು ಮರುಪಾವತಿ ನೀಡುವಂತೆ ಆದೇಶಿಸಿದೆ. ಜುಲೈ ಅಂತ್ಯದ ವೇಳೆಗೆ ಮೊದಲ ಕಂತಿನ ಮರುಪಾವತಿ ಕಂಪನಿಗಳ ಬ್ಯಾಂಕ್ ಖಾತೆಗಳನ್ನು ತಲುಪಿದೆ.

    ಆಪಲ್ ಮತ್ತು ಅಮೆಜಾನ್‌ಗೆ ಬಿಲಿಯನ್‌ಗಟ್ಟಲೆ ಮರುಪಾವತಿ: ಟೆಕ್ ದೈತ್ಯ ಆಪಲ್ 2.2 ಬಿಲಿಯನ್ ಡಾಲರ್ ಹಾಗೂ ಅಮೆಜಾನ್ 600 ಮಿಲಿಯನ್ ಡಾಲರ್ ಮರುಪಾವತಿ ಪಡೆದಿವೆ. ಅಮೆಜಾನ್ ಈ ಹಣವನ್ನು ಗ್ರಾಹಕರಿಗೆ ಹಿಂತಿರುಗಿಸುವುದಾಗಿ ಹೇಳಿದ್ದರೆ, ಆಪಲ್ ಅಮೆರಿಕದಲ್ಲೇ ಉತ್ಪಾದನೆ ವಿಸ್ತರಿಸಲು ಬಳಸುವುದಾಗಿ ತಿಳಿಸಿದೆ.

    ವಾಲ್ಮಾರ್ಟ್ ಕಾಸ್ಟ್ಕೊ  ಹಾಗೂ ಪೆಪ್ಸಿ  ಕಂಪನಿಗಳು ಈ ಮರುಪಾವತಿ ಹಣದಿಂದ ಉತ್ಪನ್ನಗಳ ಬೆಲೆಗಳನ್ನು ಇಳಿಕೆ ಮಾಡಲು ಹಾಗೂ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳನ್ನು ಸರಿದೂಗಿಸಲು ನಿರ್ಧರಿಸಿವೆ.

    ಭಾರತೀಯ ಕಂಪನಿಗಳಿಗೆ ಸಿಗಲಿದೆಯೇ ಲಾಭ?

    10 ರಿಂದ 12 ಬಿಲಿಯನ್ ಡಾಲರ್ ಸರಕುಗಳ ಮೇಲಿನ ಸುಂಕ ಹಿಂಪಡೆತ: ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಶಿಯೇಟಿವ್  ವರದಿಯ ಪ್ರಕಾರ, ಸುಂಕ ಜಾರಿಯಲ್ಲಿದ್ದಾಗ ಭಾರತದಿಂದ ಅಮೆರಿಕಕ್ಕೆ ರಫ್ತಾದ ಸುಮಾರು 166 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳ ಪೈಕಿ 10 ರಿಂದ 12 ಬಿಲಿಯನ್ ಡಾಲರ್ ಮೌಲ್ಯದ ರಫ್ತುಗಳಿಗೆ ಈ ನಿರ್ಧಾರ ಅನ್ವಯಿಸಲಿದೆ.

    ಅಮೆರಿಕದಲ್ಲಿ ತಮ್ಮ ಸ್ವಂತ ಅಂಗಸಂಸ್ಥೆಗಳನ್ನು ಹೊಂದಿರುವ ಹಾಗೂ ‘DDP’ ಆಧಾರದಲ್ಲಿ ಸಾಗಣೆ ಮಾಡಿರುವ ಭಾರತದ ಸಿಯೆಟ್ , ಬಾಲಕೃಷ್ಣ ಇಂಡಸ್ಟ್ರೀಸ್, ಸಿಎನ್​ಎಚ್ ಇಂಡಿಯಾ ಹಾಗೂ ಗೋಕಲ್ದಾಸ್ ಎಕ್ಸ್‌ಪೋರ್ಟ್ಸ್ ನಂತಹ ಪ್ರಮುಖ ಕಂಪನಿಗಳು ತಾವು ಪಾವತಿಸಿದ್ದ ಹೆಚ್ಚುವರಿ ಸುಂಕವನ್ನು ಮರಳಿ ಪಡೆಯುವ ನಿರೀಕ್ಷೆಯಲ್ಲಿವೆ.

    ಹೆಚ್ಚಿನ ಸಣ್ಣ ವ್ಯಾಪಾರಿಗಳು ಈ ಮರುಪಾವತಿಯನ್ನು ಸ್ವಾಗತಿಸಿದ್ದರೂ, ಸುಂಕಗಳಿಂದ ಉಂಟಾದ ಹಾನಿಯನ್ನು ಇದು ಸಂಪೂರ್ಣವಾಗಿ ಸರಿದೂಗಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅನೇಕ ಸಣ್ಣ ಕಂಪನಿಗಳು ನೌಕರರನ್ನು ವಜಾಗೊಳಿಸಬೇಕಾಯಿತು ಹಾಗೂ ಉಳಿತಾಯದ ಹಣವನ್ನು ಖಾಲಿ ಮಾಡಿಕೊಳ್ಳಬೇಕಾಯಿತು ಎಂದು ಅಳಲು ತೋಡಿಕೊಂಡಿವೆ.

    ಇಂಟರ್ನ್ಯಾಷನಲ್ ಎಮರ್ಜೆನ್ಸಿ ಎಕನಾಮಿಕ್ ಪವರ್ಸ್ ಆಕ್ಟ್  ಅಡಿಯಲ್ಲಿ ಟ್ರಂಪ್ ಆಡಳಿತವು ಚೀನಾ, ಮೆಕ್ಸಿಕೋ, ಕೆನಡಾ ಮತ್ತು ಭಾರತದ ಉತ್ಪನ್ನಗಳ ಮೇಲೆ 130 ಬಿಲಿಯನ್‌ ಡಾಲರ್​ಗೂ ಹೆಚ್ಚು ಸುಂಕ ವಸೂಲಿ ಮಾಡಿತ್ತು. ಸುಪ್ರೀಂ ಕೋರ್ಟ್ ಈ ನಿಲುವನ್ನು ಸಂವಿಧಾನಬಾಹಿರ ಎಂದು ತೀರ್ಪು ನೀಡಿದೆ.

    ಮರುಪಾವತಿ ಪ್ರಕ್ರಿಯೆಯ ಸವಾಲುಗಳು: ಅಮೆರಿಕದ ಸುಂಕ ಮತ್ತು ಗಡಿ ರಕ್ಷಣೆ  ವಿಭಾಗದ ಮೂಲಕ ಕಾನೂನು ಪ್ರಕ್ರಿಯೆ ನಡೆಯುತ್ತಿರುವುದರಿಂದ ಪೂರ್ಣ ಮರುಪಾವತಿ ತಲುಪಲು ಕೆಲವು ತಿಂಗಳುಗಳ ಕಾಲಾವಕಾಶ ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.




    International
    Previous Articleಕಾರ್ಕಳದಲ್ಲಿ ಭೂಕುಸಿತ ಆತಂಕ; ಸ್ಥಳ ಪರಿಶೀಲನೆ ನಡೆಸಿದ GSI ತಜ್ಞರ ತಂಡ
    Next Article ಮೋದಿ ವಿಡಿಯೋ ಡಿಲೀಟ್ ವಿವಾದ; ಮೆಟಾ ಸಿಇಒ ಝುಕರ್‌ಬರ್ಗ್ ಕ್ಷಮೆಯಾಚನೆ

    Related Posts

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026

    ಓಮನ್ ಕರಾವಳಿ ಬಳಿ ಭಾರತೀಯ ವಾಣಿಜ್ಯ ಹಡಗಿನ ಮೇಲೆ ದಾಳಿ; ಓರ್ವ ಭಾರತೀಯ ನಾವಿಕ ಸಾವು,19 ಮಂದಿ ಸುರಕ್ಷಿತ

    September 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.