ಕಡಬ: ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಕುಂಡಡ್ಕ ಫಾಲ್ಸ್ ಬಳಿ ನಡೆದಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ನಾಲ್ವರು ಸಹಪಾಠಿಗಳು ಬೆಳಿಗ್ಗೆ ಕಡಬದ ಕುಂಡಡ್ಕ ಫಾಲ್ಸ್‌ಗೆ ಆಟವಾಡಲು ತೆರಳಿದ್ದರು. ಈ ವೇಳೆ ಸ್ಥಳಕ್ಕೆ ಬಂದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ್ ಹಾಗೂ ವಿದ್ಯಾರ್ಥಿನಿಯೊಬ್ಬಳ ತಂದೆ ಜೊತೆಗೂಡಿ ದೂರುದಾರ ಬಾಲಕನಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಅಲ್ಲದೆ ದೂರುದಾರ ಬಾಲಕ ಹಾಗೂ ಜೊತೆಯಲ್ಲಿದ್ದ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.








