ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ನೌಕರರ ಭವಿಷ್ಯ ನಿಧಿ (ಇಪಿಎಫ್) ಕಚೇರಿಯ ಉದ್ಯೋಗಿ, ಕೇರಳ ಮೂಲದ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಮೇಥಾ ಪೃಥಿರಾಜ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮೇಥಾ ಅವರು ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಎದುರಿನಿಂದ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಮೇಥಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.








