Close Menu
    What's Hot

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮನೆ ತೆರಿಗೆ ಹಣ ದುರ್ಬಳಕೆ ಆರೋಪ: ಪಂಚಾಯಿತಿ ಬಿಲ್ ಕಲೆಕ್ಟರ್ ವಜಾ
    ಅಪರಾಧ

    ಮನೆ ತೆರಿಗೆ ಹಣ ದುರ್ಬಳಕೆ ಆರೋಪ: ಪಂಚಾಯಿತಿ ಬಿಲ್ ಕಲೆಕ್ಟರ್ ವಜಾ

    adminBy adminAugust 15, 2026No Comments1 Min Read

    ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

    ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ.

    ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

    ಈ ಕುರಿತು ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಅವರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    ಹಣದ ದುರುಪಯೋಗದ ವಿಚಾರ ಬೆಳಕಿಗೆ ಬಂದ ಬಳಿಕ ಪಂಚಾಯಿತಿ ವತಿಯಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ವೇಳೆ ಅವರು ಸುಮಾರು ₹3 ಲಕ್ಷವನ್ನು ಪಂಚಾಯಿತಿಗೆ ಮರುಪಾವತಿಸಿದ್ದು, ಉಳಿದ ಹಣವನ್ನು ಪಾವತಿಸದೆ ವಂಚಿಸಿರುವುದಾಗಿ ಪಿಡಿಒ ದೂರಿನಲ್ಲಿ ತಿಳಿಸಿದ್ದಾರೆ.

    ಪಂಚಾಯಿತಿ ಹಣವನ್ನು ದುರುಪಯೋಗಪಡಿಸಿಕೊಂಡು ನಂಬಿಕೆ ದ್ರೋಹ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    #crime #dakshinakannada
    Previous Articleಕೆಂಪುಕೋಟೆಯಲ್ಲಿ 78 ನಿಮಿಷಗಳಲ್ಲೇ ಮುಗಿದ ಸ್ವಾತಂತ್ರ್ಯ ದಿನದ ಮೋದಿಯ ಭಾಷಣ
    Next Article ಪುತ್ತೂರಿನಲ್ಲಿ ಭೀಕರ ಅಪಘಾತ; KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

    Related Posts

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.